Breaking News

‘ಶೀಘ್ರದಲ್ಲೇ 108 ಆರೋಗ್ಯ ಸೇವೆಗೆ ಹೊಸ ರೂಪ’ – ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: 108 ಆರೋಗ್ಯ ಸೇವೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

108 ಆರೋಗ್ಯ ಸೇವೆಯ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾತನಾಡಿದ ಅವರು, 90 ದಿನಗಳೊಳಗೆ ಆ್ಯಂಬುಲೆನ್ಸ್‌ ಸೇವೆಯಲ್ಲಿ ಉತ್ತಮ ಫ‌ಲಿತಾಂಶ ಬೇಕು. ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಹನ ಸೇವೆ ಪಡೆಯಲು ಪರಿತಪಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನು 2017ರ ಬಳಿಕ 108 ಆರೋಗ್ಯ ವಾಹಿನಿ ಹೊಸ ಟೆಂಡರ್‌ ಕರೆದಿಲ್ಲ. ಹಿಂದೆ ಗುತ್ತಿಗೆ ಪಡೆದವರು ಮನಸೋ ಇಚ್ಛೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

About gaitonlennon_rodrigues

Check Also

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..!

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’  ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು …

Leave a Reply

Your email address will not be published. Required fields are marked *

Translate »
error: Content is protected !!
Share to...