Breaking News

ಸುಳ್ಯ: ಜೀಪ್ ಮತ್ತು ಬೈಕ್ ನಡುವೆ ಅಪಘಾತ: ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಸುಳ್ಯ: ಜೀಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಸಮೀಪದ ಅರಂಬೂರಿನಲ್ಲಿ ನಡೆದಿದೆ. ಪೆರಾಜೆ ಕಡೆಯಿಂದ ಬಂದ ಜೀಪ್ ಸುಳ್ಯಕ್ಕೆ ಬರುತ್ತಿದ್ದಾಗ ಸುಳ್ಯದಿಂದ ಪೆರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಇಬ್ಬರು ವಿದ್ಯಾರ್ಥಿಗಳು ರಸ್ತೆಗೆ ಬಿದ್ದಿದ್ದಾರೆ. ಆಗ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ವಿದ್ಯಾರ್ಥಿಗಳು ಕೂಡ ಸುಳ್ಯದ ಖಾಸಗಿ ಕಾಲೇಜಿನವರಾಗಿದ್ದಾರೆ ಎಂದು ತಿಳಿದು ಬಂದಿದೆ. ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಮಂಗಳೂರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...