Breaking News

ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಮಹಿಳಾ ಪೇದೆ ಹೃದಯಾಘಾತದಿಂದ ಮೃತ್ಯು

ಬೆಂಗಳೂರು: ಕರ್ತವ್ಯ ಮುಗಿಸಿ ಮನೆಗೆ ಬಂದಿದ್ದ ಮಹಿಳಾ ಪೊಲೀಸ್‌ ಪೇದೆ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂಚಾರಿ ಮಹಿಳಾ ಪೊಲೀಸ್ ಪ್ರಿಯಾಂಕಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಪ್ರಿಯಾಂಕ ಭಾನುವಾರ ಎಂದಿನಂತೆ ಕೆಲಸವನ್ನು ಮುಗಿಸಿಕೊಂಡು ಮನೆಗೆ ಹೋಗಿದ್ದು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

2018ರಲ್ಲಿ ಮದುವೆಯಾಗಿದ್ದ ಪ್ರಿಯಾಂಕ ಅವರ ಪತಿ ಕೋವಿಡ್‌ ಮಹಾಮಾರಿಗೆ ಬಲಿಯಾಗಿದ್ದರು.ಈ ವೇಳೆ ಗರ್ಭಿಣಿ ಇದ್ದ ಪ್ರಿಯಾಂಕಾಗೆ ಒಂದು ವರ್ಷದ ಮಗು ಇದೆ.

ಇದೀಗ ಪತಿಗೆ ಕಳೆದುಕೊಂಡ ಬೆನ್ನಲ್ಲೆ ಪ್ರಿಯಾಂಕ ಕೂಡ ಮೃತಪಟ್ಟಿದ್ದು, ಅಪ್ಪ- ಅಮ್ಮ ಇಬ್ಬರೂ ಇಲ್ಲದೆ ಪುಟ್ಟ ಮಗು ಅನಾಥವಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...