Breaking News

ವಿಧಾನಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ಜೂನ್.30ರಂದು ನಡೆಯಲಿರುವಂತ ಮೂರು ವಿಧಾನಪರಿಷತ್ತಿನ ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಈ ಕುರಿತಂತೆ ಎಐಸಿಸಿಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವಂತ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ ಹಾಗೂ ಎನ್ ಎಸ್ ಬೋಸೆರಾಜು ಅವರ ಹೆಸರನ್ನು ಘೋಷಿಸಿದೆ.

ನಾಳೆ ವಿಧಾನ ಪರಿಷತ್ ಉಪ ಚುನಾವಣೆಗೆ ಕೊನೆಯ ದಿನವಾದ ಕಾರಣ ಕಾಂಗ್ರೆಸ್ ಪಕ್ಷದಿಂದ ಈ ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.

ಅಂದಹಾಗೇ ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಸಭಾ ಮೂರು ಸ್ಥಾನಗಳಿಗೆ ಉಪಚುನಾವಣೆ ಸಂಬಂಧ ಅಧಿಸೂಚನೆಯನ್ನು ಹೊರಡಿಸಿತ್ತು. ಶಾಸಕ ಲಕ್ಷ್ಮಣ್ ಸವದಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್.14ಕ್ಕೆ, ಬಾಬು ರಾವ್ ಚಿಂಚನಸೂರ್ ಜೂನ್.17ರಂದು ಹಾಗೂ ಆರ್ ಶಂಕರ್ ಅವರ ಅಧಿಕಾರಾವಧಿ ಜೂನ್.30ರಂದು ಕೊನೆಗೊಳ್ಳಲಿದೆ ಎಂದಿತ್ತು.

ಮೂವರು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಮೂರು ಸ್ಥಾನಗಳಿಗೆ ಜೂನ್.30ರಂದು ಉಪ ಚುನಾವಣೆ ನಡೆಸುವುದಾಗಿ ತಿಳಿಸಿತ್ತು.

ಇನ್ನೂ ಜೂನ್.13ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಜೂನ್.20ರ ನಾಳೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್. 30ರಂದು ಮತದಾನವನ್ನು ನಿಗದಿ ಪಡಿಸಲಾಗಿದೆ. ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...