Breaking News

ಫೇಸ್‌ಬುಕ್‌ನಲ್ಲಿ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ್ದ ಪುಣೆಯ ಟೆಕ್ಕಿಯ ಬಂಧನ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಆರೋಪಿ ಸಾಗರ್ ಬರ್ವೆ ಖಾಸಗಿ ಸಂಸ್ಥೆಯೊಂದರ ಡೇಟಾ ಫೀಡಿಂಗ್ ಹಾಗೂ ಅನಾಲಿಟಿಕ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

“ಪ್ರಕರಣದ ತನಿಖೆ ನಡೆಸುತ್ತಿದ್ದ ಮುಂಬೈ ಕ್ರೈಂ ಬ್ರಾಂಚ್ ಆರೋಪಿ ಬಾರ್ವೆಯನ್ನು ಮುಂಬೈಗೆ ಕರೆತಂದಿದೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಮತ್ತು ಮಂಗಳವಾರದವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಶರದ್ ಪವಾರ್ ವಿರುದ್ಧ ಬರ್ವೆ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ. ಪೊಲೀಸರ ಪ್ರಕಾರ, ಬೆದರಿಕೆಗಳನ್ನು ಪೋಸ್ಟ್ ಮಾಡಲು ಬಾರ್ವೆ ಎರಡು ನಕಲಿ ಖಾತೆಗಳನ್ನು ರಚಿಸಿದ್ದ.

ಆಪಾದಿತ ಬೆದರಿಕೆಗಳಿಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ , ಮಾಜಿ ಸಿಎಂ ಶರದ್ ಪವಾರ್ ಅವರಿಗೆ ಭದ್ರತೆಯನ್ನು ಹೆಚ್ಚಿಸುವಂತೆ ಪೊಲೀಸರಿಗೆ ಸೂಚಿಸಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...