Breaking News

ಉಪ್ಪಿನಂಗಡಿ: ಹೆರಿಗೆ ವೇಳೆ ತೀವ್ರ ರಕ್ತಸ್ರಾವದಿಂದ ಆಶಾ ಕಾರ್ಯಕರ್ತೆ ಮೃತ್ಯು..!!

ಉಪ್ಪಿನಂಗಡಿ: ಮಹಿಳೆಯೋರ್ವರು ಹೆರಿಗೆ ವೇಳೆ ತೀವ್ರ ರಕ್ತಸ್ರಾವ ಉಂಟಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿಯಲ್ಲಿ ನಡೆದಿದೆ. ಮೃತರನ್ನು ಹಿರೇಬಂಡಾಡಿ ಗ್ರಾಮದ ಮುರ ಕಾಲೋನಿ ನಿವಾಸಿ ಬಾಲಕೃಷ್ಣ ಗೌಡ ಎಂಬವರ ಪತ್ನಿ, ಹಿರೇಬಂಡಾಡಿ ಗ್ರಾಮದ ಆಶಾ ಕಾರಕರ್ತೆ ಭವ್ಯ (28 ವ.) ಎನ್ನಲಾಗಿದೆ. ಹಸುಗೂಸು ಗಂಡು ಮಗು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ. ಭವ್ಯರವರದ್ದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆಯಾಗುತ್ತಲೇ ತೀವ್ರ ರೀತಿಯಲ್ಲಿ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟುವ ಚಿಕಿತ್ಸೆಯಿಂದ ಪ್ರಯೋಜನವಾಗದ ಕಾರಣ ಅವರನ್ನು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿ ಚಿಕಿತ್ಸೆ ನೀಡಲಾಗಿದೆ.ಅಲ್ಲಿಯೂ ಚಿಕಿತ್ಸೆ ಫಲಕಾರಿ ಆಗದೆ ಜೂ. 21ರಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತಿ ಬಾಲಕೃಷ್ಣ ಗೌಡ, 4ನೇ ತರಗತಿ ಕಲಿಯುತ್ತಿರುವ ಪುತ್ರ ಭವಿಷ್, 3ನೇ ತರಗತಿಯ ಸ್ವಸ್ತಿಕ್ ಮತ್ತು ಹಸುಗೂಸು ಗಂಡು ಮಗುವನ್ನು ಅಗಲಿದ್ದಾರೆ

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...