Breaking News

ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಯ ಮುಖಂಡನಿಗೆ ಆಹ್ವಾನ: NSUIನ ಮುತ್ತಿಗೆ ಎಚ್ಚರಿಕೆ ಬೆನ್ನಲ್ಲೇ ಮುಂದೂಡಿಕೆ

ಮಂಗಳೂರು: ನಗರದ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನ ಕಾರ್ಯಕ್ರಮಕ್ಕೆ ಹಿಂದೂ ಸಂಘಟನೆಯ ಮುಖಂಡನನ್ನು ಅತಿಥಿಯಾಗಿ ಆಹ್ವಾನಿಸಿದ್ದ ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೆ ಮುಂದೂಡಲ್ಪಟ್ಟಿದೆ.

ಮಂಗಳೂರಿನ ಹಂಪನಕಟ್ಟೆ ಬಳಿಯ ವಿವಿ ಕಾಲೇಜಿನಲ್ಲಿ ಜೂನ್‌ 23ರಂದು ಪ್ರತಿಭಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಹಿಂದು ಜಾಗರಣ ವೇದಿಕೆ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಇದಕ್ಕೆ ಎನ್ಎಸ್‌ಯುಐ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಜೊತೆಗೆ ಕಾಲೇಜು ಪ್ರಾಂಶುಪಾಲರು, ಆಡಳಿತ ಮಂಡಳಿ ಹಾಗೂ ಕುಲಪತಿಗೆ ದೂರು ನೀಡಿದ್ದರು.


ಇದಕ್ಕೆ ಪೂರಕ ಸ್ಪಂದನೆ ಸಿಗದ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಶ್ರೀಕಾಂತ್‌ ಶೆಟ್ಟಿ ಅತಿಥಿಯಾಗಿ ಆಗಮಿಸಿದರೆ ಕಾರ್ಯಕ್ರಮಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.


ಇದರ ಬೆನ್ನಲ್ಲೇ ಪ್ರಾಂಶುಪಾಲರು ಕಾರ್ಯಕ್ರಮ ಮುಂದೂಡಿದ್ದಾರೆ. ಈ ಎರಡೂ ದಿನ ಎಂದಿನಂತೆ ತರಗತಿ ನಡೆಯಲಿದೆ. ವಿದ್ಯಾರ್ಥಿಗಳು ಸಮಸ್ತ್ರ ಧರಿಸಿ ಬರುವಂತೆ ಸೂಚಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...