Breaking News

ಪುತ್ತೂರು : ಸರ್ಕಾರಿ ಬಸ್​​ನಲ್ಲಿ ಯುವತಿಗೆ ಕಿರುಕುಳ – ಆರೋಪಿ ಬಂಧನ..!

ಪುತ್ತೂರು:  ಸರ್ಕಾರಿ ಬಸ್‌ ನಲ್ಲಿ ಯುವತಿಯೊಂದಿಗೆ ಸಹ ಪ್ರಯಾಣಿಕನೊಬ್ಬ ಅಸಭ್ಯವಾಗಿ ವರ್ತಿಸಿದ ಘಟನೆ ಸಂಬಂಧ ಆರೋಪಿಯನ್ನು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಯುವತಿಯ ದೂರು ಆಧಾರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿರುವ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಸದ್ಯ ನ್ಯಾಯಾಲಯ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.. ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಕನ್ಯಾನದ ಶಹನಾಜ್ ಎಂಬ ಮಹಿಳೆ  ದೂರು ನೀಡಿದ್ದರು. ಉಪ್ಪಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮುರ ಎಂಬಲ್ಲಿ ವ್ಯಕ್ತಿ ಅಸಭ್ಯವಾಗಿ ವರ್ತಿಸಿ ಮೈ ಮುಟ್ಟಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿತ್ತು. ಮಹಿಳೆ ಗುರುವಾರ ತನ್ನ ತಾಯಿಯೊಂದಿಗೆ ಉಪ್ಪಳದಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪುತ್ತೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ, ಹಿಂದಿನ ಸೀಟಿನಲ್ಲಿ ಕುಳಿತಿದ್ದ ಅಪರಿಚಿತ ವ್ಯಕ್ತಿಯೊಬ್ಬ ಸೀಟಿನ ಮಧ್ಯದಲ್ಲಿ ಕೈ ಹಾಕಿ ಹಿಂಬದಿ ಸೊಂಟದ ಕೆಳ ಭಾಗವನ್ನು ಹಿಡಿದು ಅಶ್ಲೀಲವಾಗಿ ವರ್ತಿಸಿದ್ದಾನೆ. ಯಾಕೆ ಈ ರೀತಿಯಾಗಿ ವರ್ತಿಸುತ್ತಿದ್ದಾರ? ಎಂದು ಪ್ರಶ್ನಿಸಿದ್ದಂತೆಯೇ ಆತ ಬೊಳುವಾರಿನಲ್ಲಿ ಬಸ್​ನಿಂದ ಇಳಿದು ಹೋಗಿದ್ದಾನೆ ಎಂದು ಶಹನಾಜ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...