Breaking News

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ. ‘ನನ್ನ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆಯುತ್ತದೆ. ನೈತಿಕವಾಗಿ ಜವಾಬ್ದಾರಿ ಹೊತ್ತು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ರಾಜೀನಾಮೆ ಪತ್ರ ನೀಡಿದ್ದೇನೆ. ನಿರ್ಧಾರದ ಬಗ್ಗೆ ಮೌಖಿಕವಾಗಿಯೂ ತಿಳಿಸಿದ್ದೇನೆ’ ಎಂದು ತಿಳಿಸಿದರು. ‘ಪಕ್ಷದಲ್ಲಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಯಾವುದೇ ಕೂಗಿಲ್ಲ. ಆದರೇ ನನ್ನ ಎರಡು ಟರ್ಮ್​ನ ಅವಧಿ ಮುಗಿದಿದೆ. ಹೀಗಾಗಿ ಸಹಜವಾಗಿಯೇ ರಾಜ್ಯಾಧ್ಯಕ್ಷರ ಬದಲಾವಣೆ ಆಗಬೇಕು. ನಮ್ಮ ಪಕ್ಷದಲ್ಲಿ ಅಧ್ಯಕ್ಷರ ಅವಧಿ ಎರಡು ವರ್ಷ. ಆದರೆ ನಾನು ನಾಲ್ಕು ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಬದಲಾವಣೆ ಪ್ರಕ್ರಿಯೆ ನಡೆಯುತ್ತಿದೆ’ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. ಬಿಜೆಪಿ ಪಕ್ಷದಲ್ಲಿ ಅಧ್ಯಕ್ಷರ ಬದಲಾವಣೆ ಕೂಗಿಲ್ಲ. ವಿ.ಸೋಮಣ್ಣ ಅವರು ಅಧ್ಯಕ್ಷ ಸ್ಥಾನ ಕೇಳಿದರೆ ಯಾವುದೇ ತಪ್ಪಿಲ್ಲ. ಅವರು ನಮ್ಮ ಪಕ್ಷದ ಹಿರಿಯ ನಾಯಕ. ರಾಷ್ಟ್ರೀಯ ಅಧ್ಯಕ್ಷರಿಗೆ ಏನು ಹೇಳಬೇಕೊ ಅದನ್ನು ಈಗಾಗಲೇ ಹೇಳಿ ಕಳುಹಿಸಿದ್ದೇನೆ ಎಂದರು.  

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...