Breaking News

ಓಡಿಶಾ: ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವು

ಓಡಿಶಾ: ಎರಡು ಬಸ್ಸುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 12 ಮಂದಿ ಸಾವನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ.

ಒಡಿಶಾದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಬರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಎಂ. ಶರವಣ ವಿವೇಕ್ ತಿಳಿಸಿದ್ದಾರೆ.

ಬರ್ಹಾಂಪುರದಲ್ಲಿ ವಿವಾಹಮಹೋತ್ಸವ ಮುಗಿಸಿಕೊಂಡು ಪ್ರಯಾಣಿಕರು ದಿಗಪಹಂಡಿ ಬಳಿಕ ಖಂಡದೇಲಿಗೆ ಹಿಂದಿರುಗುತ್ತಿದ್ದರು, ಈ ವೇಳೆ ಅಪಘಾತ ಸಂಭವಿಸಿದೆ. ಇದರಲ್ಲಿ ಒಂದೇ ಕುಟುಂಬದ 7 ಮಂದಿ ಸೇರಿ 12 ಮಂದಿ ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಅವರನ್ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...