Breaking News

‘ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣ : ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ‘NIA’ ದಾಳಿ

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಎನ್ ಐ ಎ ದಾಳಿ ನಡೆಸಿದ್ದು, ನಿಷೇಧಿತ ಪಿಎಫ್ ಸಂಘಟನೆ ಕಾರ್ಯಕರ್ತರ ಮನೆ ಮೇಲೂ ದಾಳಿ ನಡೆದಿದೆ.

ಒಟ್ಟು 6 ಕಡೆ ಏಕಕಾಲಕ್ಕೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದು, ಎಲೆಕ್ಟ್ರಾನಿಕ್ ಡಿವೈಸ್ ಸೇರಿದಂತೆ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಚಿಕನ್ ಅಂಗಡಿ ನಡೆಸುತ್ತಿದ್ದ 31 ವರ್ಷದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಅವರನ್ನು ಬೈಕ್ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...