Breaking News

ಆಪರೇಷನ್ ಥಿಯೇಟರ್​ನಲ್ಲೂ ಹಿಜಾಬ್ ಧರಿಸಲು ಅನುಮತಿ ಕೋರಿದ ವೈದ್ಯಕೀಯ ವಿದ್ಯಾರ್ಥಿನಿಗಳು

ತಿರುವನಂತಪುರಂ: ಆಪರೇಷನ್ ಥಿಯೇಟರ್‌ನಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿಕೊಡಬೇಕೆಂದು ತಿರುವನಂತಪುರದ ಸರ್ಕಾರಿ ಮೆಡಿಕಲ್ ಕಾಲೇಜಿನ 7 ಜನ ವಿದ್ಯಾರ್ಥಿನಿಯರು ಜೂನ್‌ 26ರಂದು ಪ್ರಾಂಶುಪಾಲೆಗೆ ಪತ್ರ ಬರೆದಿದ್ದಾರೆ. ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಮುಸ್ಲಿಂ ಮಹಿಳೆಯರು ತಲೆ ಮುಚ್ಚಿಕೊಳ್ಳುವುದು ಕಡ್ಡಾಯ. ಆಸ್ಪತ್ರೆ ನಿಯಮಗಳ ಪ್ರಕಾರ ಆಪರೇಷನ್ ಥಿಯೇಟರ್‌ನಲ್ಲಿ ಸೂಚನೆಗಳನ್ನು ಅನುಸರಿಸಿ, ಹಿಜಾಬ್ ಧರಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ. ಹೀಗಾಗಿ ಉದ್ದನೆಯ ತೋಳಿನ ಸ್ಕ್ರಬ್ ಜಾಕೆಟ್ ಹಾಗೂ ಸರ್ಜಿಕಲ್ ಹುಡ್​​ ಧರಿಸಲು ಅವಕಾಶ ಮಾಡಿಕೊಡಬೇಕು ವಿದ್ಯಾರ್ಥಿನಿಯರು ಆಗ್ರಹಿಸಿದ್ದಾರೆ. ಈ ಸಂಬಂಧ 2020ನೇ ಬ್ಯಾಚ್‌ನ ಮೆಡಿಕಲ್ ವಿದ್ಯಾರ್ಥಿನಿ ಪತ್ರ ಬರೆದಿದ್ದು, ಇದಕ್ಕೆ 2018, 2021, 2022ನೇ ಬ್ಯಾಚ್‌ನ ಕೆಲ ಮುಸ್ಲಿಂ ವಿದ್ಯಾರ್ಥಿಗಳು ಸಹಿ ಹಾಕಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಶುಂಪಾಲೆ ಡಾ.ಲಿನೆಟ್ ಮೋರಿಸ್, ಆಪರೇಷನ್ ಥಿಯೇಟರ್‌ಗಳಲ್ಲಿ ಅಂತರರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಳ್ಳಲಾಗುತ್ತದೆ. ಅಲ್ಲಿ ರೋಗಿಗಳ ಸುರಕ್ಷತೆಯೇ ಮುಖ್ಯ. ಹೀಗಿರುವಾಗ ವಿದ್ಯಾರ್ಥಿನಿಯರ ಬೇಡಿಕೆಯನ್ನು ಸದ್ಯಕ್ಕೆ ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಚರ್ಚಿಸಲು ಸಮಿತಿ ರಚಿಸಲಾಗಿದ್ದು, ಮುಂದಿನ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...