Breaking News

ಟ್ವಿಟ್ಟರ್ ಗೆ 50 ಲಕ್ಷ ದಂಡ ವಿಧಿಸಿದ ಕರ್ನಾಟಕ ಹೈಕೋರ್ಟ್‌

ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟ್ವಿಟ್ಟರ್‌ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿ 50 ಲಕ್ಷ ರೂ. ದಂಡ ವಿಧಿಸಿದೆ. ಹೌದು ವ್ಯಕ್ತಿಗತವಾಗಿ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ ಮಾಡಿರುವ ನಿರ್ಬಂಧ ಆದೇಶಗಳನ್ನು ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿದ್ದ ಅರ್ಜಿಗಳನ್ನು ಶುಕ್ರವಾರ ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್‌, ಟ್ವಿಟರ್‌ಗೆ ಬರೋಬ್ಬರಿ ₹50 ಲಕ್ಷ ದಂಡ ವಿಧಿಸಿದೆ. ಇನ್ನು ಇತ್ತೀಚಿನ ವರ್ಷಗಳಲ್ಲಿ ಇಷ್ಟು ದೊಡ್ಡ ಮೊತ್ತದ ದಂಡ ವಿಧಿಸಿದ ಮೊದಲ ಪ್ರಕರಣ ಇದಾಗಿದೆ. ಸುದೀರ್ಘ ವಿಚಾರಣೆ ಬಳಿಕ ಏಪ್ರಿಲ್‌ 21ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಇಂದು ಪ್ರಕಟಿಸಿದೆ. “ಅರ್ಜಿಗಳು ಅನೂರ್ಜಿತಗೊಂಡಿದ್ದು, ಟ್ವಿಟರ್‌ಗೆ ₹50 ಲಕ್ಷ ದಂಡ ವಿಧಿಸಲಾಗಿದೆ. 45 ದಿನಗಳ ಒಳಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಟ್ವಿಟರ್‌ ದಂಡದ ಮೊತ್ತವನ್ನು ಪಾವತಿಸಬೇಕು. ಇದನ್ನು ಪಾಲಿಸಲು ಟ್ವಿಟರ್‌ ವಿಫಲವಾದರೆ 45 ದಿನಗಳ ಬಳಿಕ ಪ್ರತಿದಿನ ಹೆಚ್ಚುವರಿಯಾಗಿ ₹5 ಸಾವಿರ ಪಾವತಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ. ಕೇಂದ್ರ ಸರ್ಕಾರದ ಹತ್ತು ನಿರ್ಬಂಧ ಆದೇಶ ಮತ್ತು 2021ರ ಫೆಬ್ರವರಿಯಿಂದ 2022ರ ಫೆಬ್ರವರಿಯ ನಡುವೆ 39 ಯುಆರ್‌ಎಲ್‌ಗಳನ್ನು ತೆಗೆದು ಹಾಕುವಂತೆ ಕೇಂದ್ರ ಸರ್ಕಾರ ಟ್ವಿಟರ್‌ಗೆ ನಿರ್ದೇಶಿಸಿತ್ತು. ಒಟ್ಟು 1,474 ಖಾತೆಗಳು ಮತ್ತು 175 ಟ್ವೀಟ್‌ಗಳ ಪೈಕಿ 39 ಯುಆರ್‌ಎಲ್‌ಗಳನ್ನು ನಿರ್ಬಂಧಿಸಿರುವ ಆದೇಶವನ್ನು ಮಾತ್ರ ಟ್ವಿಟರ್‌ ಅರ್ಜಿಯಲ್ಲಿ ಪ್ರಶ್ನಿಸಿತ್ತು. ಇನ್ನು ಕೇಂದ್ರ ಸರ್ಕಾರದ ಟ್ವಿಟರ್ ಗೆ ಆದೇಶಿಸಿತ್ತು. ಈ ನಿಯಮ ಪಾಲಿಸದ ಕಾರಣ ದಂಡ ವಿಧಿಸಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...