Breaking News

ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಇಂದಿನಿಂದ (ಸೋಮವಾರ ಜುಲೈ 3ರಿಂದ) ಆರಂಭವಾಗಲಿದೆ. 10 ದಿನಗಳ ಕಲಾಪದಲ್ಲಿ ಕಾಂಗ್ರೆಸ್ ನೀಡಿದ್ದ ಐದು ‘ಗ್ಯಾರಂಟಿ’ಗಳ ಅನುಷ್ಠಾನದಲ್ಲಿ ಗೊಂದಲ, ಧಾರ್ಮಿಕ ಸ್ವಾತಂತ್ರ್ಯ ಸಂರಕ್ಷಣೆ ಹಕ್ಕು (ಮತಾಂತರ ನಿಷೇಧ) ಕಾಯ್ದೆ ರದ್ದತಿಗೆ ಮಸೂದೆ ಮಂಡನೆ ಮತ್ತಿತರ ವಿಚಾರಗಳು ಉಭಯ ಸದನಗಳಲ್ಲಿ ಪ್ರತಿಧ್ವನಿಸಲಿವೆ. ಆಡಳಿತ ಪಕ್ಷ ಕಾಂಗ್ರೆಸ್‌ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ನಡುವೆ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಮಧ್ಯಾಹ್ನ 12 ಗಂಟೆಗೆ ವಿಧಾನಸಭೆಯ ಸಭಾಂಗಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆ ಮೂಲಕ, ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನಕ್ಕೆ ಚಾಲನೆ ಸಿಗಲಿದೆ. ಹೊಸ ಸರ್ಕಾರದ ಮುನ್ನೋಟ, ಅಭಿವೃದ್ಧಿ ಯೋಜನೆಗಳ ಜೊತೆಗೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುವ ವಾಗ್ದಾನ ರಾಜ್ಯಪಾಲರ ಭಾಷಣದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...