Breaking News

ದಕ್ಷಿಣ ಆಫ್ರಿಕಾದಲ್ಲಿ ವಿಷಾನಿಲ ಸೋರಿಕೆ; ಮಕ್ಕಳು ಸೇರಿ 16 ಮಂದಿ ಸಾವು

ಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ ಬಳಿ ಸೈಕ್ಲಿಂಡರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಪೊಲೀಸರು ಬುಧವಾರ ತಿಳಿಸಿದ್ದಾರೆ.

24 ಮಂದಿ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ತುರ್ತು ಸೇವೆಗಳು ತಿಳಿಸಿವೆ.

ಆದ್ರೆ, ಸಾವಿನ ಸಂಖ್ಯೆಯನ್ನು ನಿಖರವಾಗಿ ಇನ್ನೂ ಖಚಿತಪಡಿಸಲಾಗಿಲ್ಲ.

ಜೋಹಾನ್ಸ್‌ಬರ್ಗ್‌ನ ಪೂರ್ವ ಹೊರವಲಯದಲ್ಲಿರುವ ಬೋಕ್ಸ್‌ಬರ್ಗ್ ನಗರದ ಅನೌಪಚಾರಿಕ ವಸಾಹತು ಪ್ರದೇಶದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೇ ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿವೆ ಎಂದು ದಕ್ಷಿಣ ಆಫ್ರಿಕಾದ ಪೊಲೀಸ್ ಸೇವೆಗಳು ತಿಳಿಸಿವೆ.

ಏಂಜೆಲೋ ವಸಾಹತು ಪ್ರದೇಶದಲ್ಲಿನ ಗುಡಿಸಲಿನಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ನಿಂದ ಸೋರಿಕೆಯಾಗಿ ಸಾವು ಸಂಭವಿಸಿದೆ ಎಂದು ತುರ್ತು ಸೇವೆಗಳ ವಕ್ತಾರ ವಿಲಿಯಂ ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...