Breaking News

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ಕಾಲು ಸಂಕ ದಾಟುವಾಗ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಚರಂಡಿಗೆ ಬಿದ್ದು ಮೃತಪಟ್ಟ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಎಂಬಲ್ಲಿ ನಡೆದಿದೆ.‌

ಪುಣಚ ಗ್ರಾಮದ ಮಾಯಿಲ ಮೂಲೆ ನಿವಾಸಿ ಕೇಶವ ನಾಯ್ಕ ಎಂ (51) ಮೃತಪಟ್ಟವರು.‌

ಕೇಶವ ನಾಯ್ಕ ಅವರು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿರುವ ತನ್ನ ಬಾಡಿಗೆ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮನೆಯ ಬಳಿಯಿರುವ ನೀರು ಹರಿಯುವ ಸಾರ್ವಜನಿಕ ಕಣಿಗೆ ಹಾಕಿರುವ ಪಾಪನ್ನು ದಾಟುತ್ತಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಕವುಚಿ ಬಿದ್ದು ಮೇಲೆ ಏಳಲು ಆಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...