Breaking News

ಅಕ್ರಮವಾಗಿ ನೆಲೆಸಿದ್ದ 105 ವಿದೇಶಿಗರ ಗಡಿಪಾರು; ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು: ಬೆಂಗಳೂರಿಗೆ ವಿವಿಧ ಕಾರಣಗಳಿಂದ ಆಗಮಿಸಿದ್ದ 678 ವಿದೇಶಿ ಪ್ರಜೆಗಳಲ್ಲಿ ಅಕ್ರಮವಾಗಿ ತಂಗಿದ್ದ 105 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ವೀಸಾ ಅವಧಿ ಮುಗಿದ ಬಳಿಕವೂ ಬೆಂಗಳೂರಿನಲ್ಲಿ ವಾಸವಾಗಿರುವ ವಿದೇಶಿ ಪ್ರಜೆಗಳ ವಿರುದ್ಧ ಬೆಂಗಳೂರು ಪೊಲೀಸರು 240 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣಗಳು ಕಳೆದ 30 ತಿಂಗಳಿಂದ ದಾಖಲಾಗಿದ್ದಾಗಿವೆ ಎಂದು ತಿಳಿಸಿದ್ದಾರೆ.

ಜನವರಿ 2021ರಿಂದ ಜೂನ್ 2023ರವರ ಅವಧಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 105 ವಿದೇಶಿ ಪ್ರಜೆಗಳ ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...