Breaking News

ಬಾಲಸೋರ್ ರೈಲು ಅಪಘಾತ ಪ್ರಕರಣ ; 7 ರೈಲ್ವೆ ನೌಕರರ ಅಮಾನತು

ವದೆಹಲಿ: ಒಡಿಶಾದಲ್ಲಿ ತ್ರಿವಳಿ ರೈಲು ಅಪಘಾತಕ್ಕೆ ಕಾರಣವಾದ ಕರ್ತವ್ಯ ಲೋಪದ ಆರೋಪದ ಮೇಲೆ ಸಿಬಿಐ ಬಂಧಿಸಿರುವ ಮೂವರು ಉದ್ಯೋಗಿಗಳು ಸೇರಿದಂತೆ ಕನಿಷ್ಠ ಏಳು ರೈಲ್ವೆ ಉದ್ಯೋಗಿಗಳನ್ನ ಅಮಾನತುಗೊಳಿಸಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜೂನ್ 2 ರಂದು ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ರೈಲ್ವೆ ನಿಲ್ದಾಣದ ಬಳಿ ತ್ರಿವಳಿ ರೈಲು ಡಿಕ್ಕಿಯಲ್ಲಿ 293 ಜನರು ಸಾವನ್ನಪ್ಪಿದ್ರೆ, 1,200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

 

ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಮಿಶ್ರಾ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಅಧಿಕಾರಿಗಳು ಜಾಗರೂಕರಾಗಿದ್ದರೆ, ಅಪಘಾತವನ್ನ ತಪ್ಪಿಸಬಹುದಿತ್ತು” ಎಂದು ಹೇಳಿದರು.

“ಸಿಬಿಐನಿಂದ ಬಂಧಿಸಲ್ಪಟ್ಟ ಮೂವರು ಸೇರಿದಂತೆ ರೈಲ್ವೆ ಇದುವರೆಗೆ ಏಳು ಉದ್ಯೋಗಿಗಳನ್ನು ಅಮಾನತುಗೊಳಿಸಿದೆ. ನಿಯಮಗಳ ಪ್ರಕಾರ, 24 ಗಂಟೆಗಳ ಕಾಲ ಬಂಧಿಸಲ್ಪಟ್ಟ ಉದ್ಯೋಗಿಯನ್ನ ಅಮಾನತುಗೊಳಿಸಲಾಗಿದೆ” ಎಂದು ಮಿಶ್ರಾ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ತಿಳಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...