Breaking News

ಅಧಿವೇಶನದಲ್ಲಿ ಉಪ ಸಭಾಪತಿ ಮೇಲೆ ಕಾಗದ ಹರಿದು ಬಿಸಾಕಿದ ಬಿಜೆಪಿ ಶಾಸಕರು!

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದ ಘಟನೆ ನಡೆದಿದೆ.

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದ್ದು, ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು.

ಇನ್ನು ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು. ರಾಜಯಃ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದಾರೆ.

ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು. ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದಾರೆ. ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...