Breaking News

ವಿಧಾನಸಭೆಯಲ್ಲಿ ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದ 10 ಬಿಜೆಪಿ ಸದಸ್ಯರ ಅಮಾನತು

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಬಿಜೆಪಿಯ ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಮಾಡಿದ್ದಾರೆ. ಈ 10 ಸದಸ್ಯರನ್ನು ಈ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದ್ದಾರೆ. ಕಲಾಪದ ವೇಳೆ ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಸಂಬಂಧ ಸ್ಪೀಕರ್ ಯುಟಿ ಖಾದರ್ ಅವರಿ​ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದಾರೆ. ಈ ದೂರಿನ ಅಧಾರದ ಮೇಲೆ ಬಿಜೆಪಿಯ 10 ಸದಸ್ಯರನ್ನು ಅಮಾನತು ಮಾಡಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...