Breaking News

ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ

ಣಿಪುರ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಭೀಕರ ಘಟನೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮಾಹಿತಿ ನೀಡಿದ್ದಾರೆ.

 

ರಾಜ್ಯ ಪೊಲೀಸರು ತೌಬಲ್ ಜಿಲ್ಲೆಯ ಹುಯಿರೆಮ್ ಹೆರೋಡಾಸ್ ಮೈತೆಯ್ ಎಂಬ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಘಟನೆಯ ಸಂದರ್ಭದಲ್ಲಿ ಅವರು ಹಸಿರು ಟೀ ಶರ್ಟ್ ಧರಿಸಿ ಮಹಿಳೆಯೊಬ್ಬರನ್ನು ಎಳೆದುಕೊಂಡು ಹೋಗುತ್ತಿರುವುದು ವೈರಲ್ ವಿಡಿಯೋದಲ್ಲಿ ಕಂಡುಬಂದಿದೆ.

ಅಪರಾಧ ಸಂಭವಿಸಿದಾಗಿನಿಂದ ಕ್ರಮ ಕೈಗೊಳ್ಳುವಲ್ಲಿ ಗಮನಾರ್ಹ ವಿಳಂಬಕ್ಕಾಗಿ ಬಾರೀ ಆಕ್ರೋಶ ವ್ಯಕ್ತವಾಗಿದ್ದು, ಅಲ್ಲಿನ ಮಹಿಳೆಯರು ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಘಾತಕಾರಿ ವಿಡಿಯೋದಲ್ಲಿ, ಸ್ಥಳೀಯರು, ವಿಶೇಷವಾಗಿ ಮಹಿಳೆಯರು, ನೊಂಗ್‌ಪೋಕ್ ಸೆಕ್ಮೈನಲ್ಲಿ ಹುಯಿರೆಮ್ ಹೆರೋಡಾಸ್ ಮೈತೆಯ್ ಮನೆಗೆ ಬೆಂಕಿ ಹಚ್ಚಿದರು. ಮಹಿಳೆಯರನ್ನು ಕೀಳಾಗಿ ಕಾಣುವ ಇಂತಹ ಶೋಚನೀಯ ಕೃತ್ಯಗಳ ವಿರುದ್ಧ ಜಾತಿ, ಮತ ಬೇಧವಿಲ್ಲದೆ ಸಮುದಾಯದ ವಿವಿಧ ಮಹಿಳೆಯರು ಧ್ವನಿಗೂಡಿಸಿದರು. ಭವಿಷ್ಯದಲ್ಲಿ ಇಂತಹ ಘೋರ ಕೃತ್ಯಗಳು ನಡೆಯದಂತೆ ಸರಕಾರ ಸೂಕ್ತ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...