Breaking News

ಮೇಘಾಲಯದ ಮುಖ್ಯಮಂತ್ರಿ ಕಚೇರಿ ಮೇಲೆ ದಾಳಿ : ಬಿಜೆಪಿಯ ಮಹಿಳಾ ಮೋರ್ಚಾದ 2 ಪದಾಧಿಕಾರಿಗಳು ಸೇರಿದಂತೆ 18 ಜನರು ಬಂಧನ

ಶಿಲ್ಲಾಂಗ್: ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ಸೋಮವಾರ ರಾತ್ರಿ ಪ್ರತಿಭಟನಕಾರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ, ಬಿಜೆಪಿ ಮಹಿಳಾ ಮೋರ್ಚಾದ ಇಬ್ಬರು ಪದಾಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

 

ದಾಳಿಗೆ ಪ್ರಚೋದಿಸಿದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್‌ನ ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಬೆಲಿನಾ ಎಂ ಮರಕ್, ದಿಲ್ಚೆ ಚ್ ಮರಕ್ ಬಂಧಿತರು ಎಂದು ಅವರು ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...