Breaking News

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಧಾರಾಕಾರ ಮಳೆ: ರೆಡ್ ಅಲರ್ಟ್​ ಘೋಷಣೆ

ದಕ್ಷಿಣ ಕನ್ನಡ: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜುಲೈ 29ರವರೆಗೆ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದ್ದು, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ  ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಅದೇ ರೀತಿ ಪಿಯು, ಪದವಿ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...