Breaking News

ಮಂಗಳೂರು: ಮಣಿಪುರ ಹಿಂಸಾಚಾರ ಖಂಡಿಸಿ ಬೃಹತ್‌ ಪ್ರತಿಭಟನೆ

ಮಂಗಳೂರು: ಮಣಿಪುರ ಹಿಂಸಾಚಾರರ ಖಂಡಿಸಿ ಜುಲೈ 27ರಂದು ಕ್ಯಾಥೋಲಿಕ್ ಸಭಾ, ಮಂಗಳೂರು ಪ್ರದೇಶ ಮತ್ತು ಇತರ ಸಂಘಟನೆಗಳ ವತಿಯಿಂದ ನಗರದ ಟೌನ್‌ ಹಾಲ್‌ ಮುಂಭಾಗ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಸಮುದಾಯದ ಹಿರಿಯ ಮುಖಂಡ ರಾಯ್ ಕ್ಯಾಸ್ಟೆಲಿನೋ, ಮಣಿಪುರದ ಜನತೆಯೊಂದಿಗೆ ನಾವಿದ್ದೇವೆ. ಭಯಪಡುವ ಅಗತ್ಯವಿಲ್ಲ. ಅಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಹಿಂಸಾಚಾರವನ್ನು ಮರೆಮಾಡಲಾಗಿದೆ. ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಇಡೀ ಜಗತ್ತೇ ಕಂಡ ಭಯಾನಕ ಮತ್ತು ನಾಚಿಕೆಗೇಡಿನ ಘಟನೆಯಾಗಿದೆ. ಮಣಿಪುರದಲ್ಲಿ ಹಲವಾರು ಚರ್ಚ್‌ಗಳನ್ನು ಕೆಡವಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಹೋರಾಟಗಾರ್ತಿ ವಿದ್ಯಾ ದಿನಕರ್, ಮಣಿಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ಅಲ್ಲದೆ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ ಕಂಡಿದೆ. ಕೇಂದ್ರ ಸರ್ಕಾರವು ಅದಾನಿ ಮತ್ತು ಅಂಬಾನಿಗೆ ಮಾತ್ರ ರಕ್ಷಣೆ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಹಿಳೆಯರ ಮೇಲಿನ  ದೌರ್ಜನ್ಯವನ್ನು ಖಂಡಿಸಿದ ಅವರು ಬೆತ್ತಲೆ ಮೆರವಣಿಗೆಗೆ ಒಳಗಾದ ಮಹಿಳೆಯರಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಧಾರ್ಮಿಕ ಮುಖಂಡ ಎಸ್.ಬಿ.ಮಹಮ್ಮದ್ ಮಾತನಾಡಿ, ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದರು. ಕಾರ್ಯಕರ್ತ ಸ್ಟಾನ್ಲಿ ಪಿಂಟೋ ಉಪಸ್ಥಿತರಿದ್ದರು. ವಿವಿಧ ಸಂಘಟನೆಗಳ ಸಹಭಾಗಿತ್ವ: ಕೆಥೊಲಿಕ್‌ ಸಭಾ ಮಂಗಳೂರು, ಮಂಗಳೂರು ಧರ್ಮ ಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್‌ ಕೌನ್ಸಿಲ್‌ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...