Breaking News

ದೆಹಲಿ-ಮುಂಬೈ ವಿಮಾನದಲ್ಲಿ ವೈದ್ಯೆ ಮೇಲೆ ಲೈಂಗಿಕ ದೌರ್ಜನ್ಯ : ಪ್ರಾಧ್ಯಾಪಕನ ಬಂಧನ

ಮುಂಬೈ: ‘ದೆಹಲಿ- ಮುಂಬೈ ವಿಮಾನದಲ್ಲಿ ವೈದ್ಯೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕಾಗಿ ಪ್ರಾಧ್ಯಾಪಕರೊಬ್ಬರನ್ನು ಬಂಧಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

‘ಈ ಘಟನೆ ಬುಧವಾರ ನಡೆದಿದೆ. ವೈದ್ಯೆ ಹಾಗೂ ಪ್ರಾಧ್ಯಾಪಕ ಅಕ್ಕಪಕ್ಕದ ಆಸನಗಳಲ್ಲಿ ಕುಳಿತಿದ್ದರು.

ವಿಮಾನವು ಮುಂಬೈನಲ್ಲಿ ಇಳಿಯುವುದಕ್ಕೆ ಸ್ವಲ್ಪ ಸಮಯದ ಮುನ್ನ ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವೈದ್ಯೆ ದೂರು ನೀಡಿದ್ದಾರೆ’ ಎಂದು ಅವರು ಹೇಳಿದರು.

‘ಈ ಕುರಿತು ಇಬ್ಬರ ನಡುವೆ ಜಗಳ ನಡೆದಿದೆ. ಮಧ್ಯಪ್ರವೇಶಿಸಿದ ವಿಮಾನದ ಸಿಬ್ಬಂದಿಗೆ ಸಂತ್ರಸ್ತೆಯು ಪ್ರಕರಣದ ಬಗ್ಗೆ ವಿವರಿಸಿದ್ದಾರೆ. ವಿಮಾನವು ಮುಂಬೈಗೆ ಬಂದಿಳಿದ ತಕ್ಷಣ ಸಂತ್ರಸ್ತೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯವು ಆರೋಪಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...