Breaking News

ಉಡುಪಿ: ಕಾಲೇಜು ಶೌಚಾಲಯ ಚಿತ್ರೀಕರಣ – ಸಂತ್ರಸ್ತೆಯ ಹೇಳಿಕೆ ಪಡೆದ ನ್ಯಾಯಾಲಯ

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದ್ದು, ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿಯಿಂದ ನ್ಯಾಯಾಲಯವು ಹೇಳಿಕೆ ಪಡೆದುಕೊಂಡಿದೆ. ಪೊಲೀಸರು ಗೌಪ್ಯವಾಗಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಸಾಕಷ್ಟು ಮನವಿಗಳು ಬರುತ್ತಿವೆ ಎಂದು ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.ಈ ಮಧ್ಯೆ ಚಿತ್ರೀಕರಣ ಮಾಡಿದ್ದರು ಎನ್ನಲಾದ ಮೊಬೈಲ್ ಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು ಅದರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...