Breaking News

ಚಂದ್ರಯಾನ-3 ಗಗನ ನೌಕೆ ಸೆರೆಹಿಡಿದ ಚಂದ್ರನ ಮೊದಲ ಚಿತ್ರ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ.

 

 

ಚಂದ್ರ ಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ ಕುರಿತ ವೀಡಿಯೋ ತುಣುಕನ್ನು ಚಂದ್ರಯಾನ್-3 ಮಿಷನ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.ಮೂನ್ ಮಿಷನ್ (Moon Mission) ಕಾರ್ಯಾಚರಣೆ ಇಲ್ಲಿಯವರೆಗೆ ಸುಗಮವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಆಗಸ್ಟ್ 23 ರಂದು ವಿಕ್ರಮ ಲ್ಯಾಂಡರ್ ಚಂದ್ರನ ಮೇಲೆ ಲ್ಯಾಂಡ್ ಆಗಲಿದೆಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಶನಿವಾರ ಸಂಜೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಸೇರಿದೆ ಇಸ್ರೋ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
. ಚಂದ್ರಯಾನ-3 ಗಗನನೌಕೆಯನ್ನ ಸೇರಿಸುವ ಲೂನಾರ್ ಆರ್ಬಿಟ್ ಇನ್ಸೆರ್ಷನ್ ಪ್ರಕ್ರಿಯೆಯನ್ನು ಇಸ್ರೋ ಪೂರ್ಣಗೊಳಿಸಿದೆ. ಬೆಂಗಳೂರಿನ ಇಸ್ರೋದ ಟೆಲಿಮೆಟ್ರಿ, ಟ್ರ‍್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ಸಂಸ್ಥೆಯು ಲೂನಾರ್ ಆರ್ಬಿಟ್ ಇಂಜೆಕ್ಷನ್ ಪ್ರಕ್ರಿಯೆಯನ್ನು ಕಾರ್ಯಗತಗೊಳಿಸುವಲ್ಲಿ ಯಶಸ್ವಿಯಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...