Breaking News

ಮಂಗಳೂರು ಡ್ರಗ್ಸ್ ಮಾಫಿಯಾ ವಿರುದ್ಧ ಮುಂದುವರಿದ ಪೊಲೀಸರ ಕಾರ್ಯಾಚರಣೆ; ಆರೋಪಿಯ ಬಂಧನ

ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಸಾರ್ವಜನಿಕರಿಗೆ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಲಪಾಡಿ ಗ್ರಾಮದ ಕೆಸಿ ರೋಡ್ ಬಳಿ ಆರೋಪಿಗಳ ಮಾದಕ ವಸ್ತು ಮಾರಾಟ ಚಟುವಟಿಕೆಗಳ ಬಗ್ಗೆ ಖಚಿತವಾದ ಗುಪ್ತಚರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಮಂಗಳೂರು ಪೊಲೀಸರು ಕಾಸರಗೋಡಿನ ಉಪ್ಪಳ ನಿವಾಸಿ ಮಹಮ್ಮದ್ ರಫೀಕ್ (40) ಎಂಬಾತನನ್ನು ಬಂಧಿಸಿದ್ದಾರೆ.ಮಹಮ್ಮದ್ ರಫೀಕ್ (40) ಎಂಬಾತನಿಂದ ಒಂದು ಡಿಜಿಟಲ್ ತೂಕದ ಮಾಪಕ 2,50,000 ರೂಪಾಯಿ ಮೌಲ್ಯದ 50 ಗ್ರಾಂ ಎಂಡಿಎಂಎ, 8,000 ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಒಟ್ಟಾರೆಯಾಗಿ ಅಂದಾಜು 2,68,500 ರೂಪಾಯಿ ಮೌಲ್ಯದವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿಎ ಹೆಗ್ಡೆ ಮತ್ತು ಸಿಸಿಬಿ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...