Breaking News

ಮಂಗಳೂರು: ಅನಧಿಕೃತ ಬೀದಿ ಬದಿ ವ್ಯಾಪಾರ

ಮಹಾನಗರ: ನಗರದಲ್ಲಿ‌ ಅನಧಿಕೃತ ಬೀದಿ ಬದಿ ವ್ಯಾಪಾರ ತಡೆಯುವ ನಿಟ್ಟಿನಲ್ಲಿ ಸ್ಥಳೀಯಾಡಳಿತ ಕಾರ್ಯೋನ್ಮುಖವಾಗಿದ್ದು, ವಲಯವಾರು ಪ್ರತ್ಯೇಕ ಟಾಸ್ಕ್ ಫೋರ್ಸ್ ರಚನೆ‌ ಮಾಡಲು ನಿರ್ಧರಿಸಲಾಗಿದೆ.
ಪಾಲಿಕೆಯಿಂದ ಈಗಾಗಲೇ ನಾಲ್ಕು ವಲಯವನ್ನಾಗಿ ವಲಯ-1 ಸುರತ್ಕಲ್‌, ವಲಯ-2 ಕೇಂದ್ರ ಕಚೇರಿ, ವಲಯ-3 ಕದ್ರಿ ಎಂದು ವಿಂಗಡಿಸಲಾಗಿದೆ. ಅದರಂತೆ ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ನಡೆಸಲಾಗುತ್ತದೆ.

 

ಟಾಸ್ಕ್ ಫೋರ್ಸ್ ತಂಡದಲ್ಲಿ ಮುಖ್ಯವಾಗಿ ಕಂದಾಯ, ಆರೋಗ್ಯ, ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು, ಇರಲಿದ್ದಾರೆ. ನಗರದ ಸ್ಟೇಟ್‌ಬ್ಯಾಂಕ್‌, ಅತ್ತಾವರ, ಮಣ್ಣಗುಡ್ಡೆ, ಚಿಲಿಂಬಿ, ಪಂಪ್‌ವೆಲ್‌ ಸಹಿತ ಹಲವು ಕಡೆಗಳಲ್ಲಿ ಅನಧಿಕೃತ ಅಂಗಡಿಗಳು ಕಾರ್ಯಾಚರಿಸುತ್ತಿದೆ ಎಂದು ಈಗಾಗಲೇ ತೆರವು ನಡೆಸಲಾಗಿತ್ತು.
ಉದ್ದಿಮೆ ಪರವಾನಗಿ ಪಡೆಯದೇ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್‌ಗಳಲ್ಲಿ ಕಾನೂನು ಬಾಹಿರವಾಗಿ ರಸ್ತೆ ಬದಿ ಯಲ್ಲಿ ಹಾಗೂ ಫುಟ್‌ಪಾತ್‌ಗಳಲ್ಲಿ ಬೀದಿ – ಬದಿ ವ್ಯಾಪಾರಸ್ಥರು ಅನಧಿಕೃತ ವಾಗಿ ಅಂಗಡಿಗಳು, ಗೂಡಂಗಡಿ ಮೂಲಕ ಇತರ ವ್ಯಾಪಾರ ವಹಿವಾಟು ಗಳನ್ನು ನಡೆಸುತ್ತಿರುವುದು ಪಾಲಿಕೆ ಗಮನಕ್ಕೆ ಬಂದಿದೆ. ಸಾರ್ವಜನಿಕರಿಗೆ, ಪಾದಚಾರಿಗಳಿಗೆ ಓಡಾಡಲು, ವಾಹನ ಸವಾರನಿಗೆ ರಸ್ತೆತಡೆ ಉಂಟಾಗಿ ತೊಂದರೆ ಯಾಗುತ್ತಿರುವ ಬಗ್ಗೆ ಪಾಲಿಕೆಗೆ ಈಗಾಗಲೇ ಸಾರ್ವಜನಿಕರು ದೂರುತ್ತಿದ್ದಾರೆ. ಈ ಹಿನ್ನೆಲೆ ಯಲ್ಲಿ ಇದೀಗ ಮತ್ತೂಮ್ಮೆ ಟೈಗರ್‌ ಕಾರ್ಯಾಚರಣೆ ನಡೆಸಲು ಮಹಾನಗರ ಪಾಲಿಕೆ ನಿರ್ಧರಿಸಿದೆ ಎನ್ನುತ್ತಾರೆ ಅಧಿಕಾರಿಗಳು.
ಟಾಸ್ಕ್ ಫೋರ್ಸ್ ನಲ್ಲಿ ಪೊಲೀಸರು‌
ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಲುವ ವೇಳೆ ಹಲವು ಕಡೆಗಳಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವ ಘಟನೆ ಅಲ್ಲಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡುವ ನಿಟ್ಟಿನಲ್ಲಿ ಪಾಲಿಕೆಯು ನಿರ್ಧರಿಸಿದೆ.ಅನಧಿಕೃತ ಬೀದಿ ಬದಿ ವ್ಯಾಪಾರ ನಡೆಸಲಾಗುತ್ತಿದೆ ಎಂದು ಸಾರ್ವಜನಿಕರಿಂದಲೂ ದೂರುಗಳನ್ನು ಬರುತ್ತಿದೆ. ಎಂದು ಪಾಲಿಕೆ ಆಯುಕ್ತರಾದ ಆನಂದ್‌ ಸಿ.ಎಲ್‌. ಮಾಹಿತಿ ನೀಡಿದ್ದಾರೆ.

 

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...