Breaking News

ಕಂಠಪೂರ್ತಿ ಕುಡಿದು ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡಿಐಜಿ

ಪಣಜಿ: ಆರೋಗ್ಯ ಸರಿಯಿಲ್ಲ ಎಂದು ಎ ಕೋನ್ ಆಗಸ್ಟ್ ೧ರಿಂದ ೧೪ ರ ವರೆಗೆ ರಜೆ ಪಡೆದು ಪಬ್‍ಗೆ ಹೋಗಿ ಕಂಠಪೂರ್ತಿ ಕುಡಿದು ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಗೋವಾದ ಬಾಗಾಟದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.ಡಿಐಜಿ ಈ ಹಿಂದೆ ದೆಹಲಿ ಪೋಲಿಸ್ ಇಲಾಖೆಯಲ್ಲಿ ಉನ್ನತ ಹುದ್ಧೆಯಲ್ಲಿದ್ದರು ಎಂದು ವರದಿಯಾಗಿದ್ದು.

 

 

ಎ ಕೋನ್ ಕುಡಿದ ಅಮಲಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಡಿಐಜಿ ಮಹಿಳೆಯೊಂದಿಗೆ ಮಾತಿನ ಚಕಮಕಿಯಲ್ಲಿ ತೊಡಗಿರುವುದು ಕೂಡ ಕಾಣಬಹುದಾಗಿದೆ. ಈ ಘಟನೆಯ ಮಾಹಿತಿ ಪಡೆದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ್ ಸಂಬಂಧಿತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಗೋವಾ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಪೋಲಿಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಬೇಕು ಎಂಬ ಆಗ್ರಹ ವ್ಯಕ್ತವಾಗಿದೆ

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...