Breaking News

ಡ್ರಗ್ಸ್ ಮಾಫಿಯಾ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸರ ಕಾರ್ಯಾಚರಣೆ: ಮೂವರು ಆರೋಪಿಗಳ ಬಂಧನ

ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಮಂಗಳವಾರ ಮುಂದುವರಿದಿದ್ದು, ಕಾರ್ಯಾಚರಣೆಗಳಲ್ಲಿ 10 ಲಕ್ಷ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ ಎಂಡಿಎಂಎ ಡ್ರಗ್ಸ್ ಜಪ್ತಿ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿಎ ಹೆಗ್ಡೆ ನೇತೃತ್ವದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಫಳ್ನೀರ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಗಳೂರಿನಿಂದ ತಂದಿದ್ದು ಎನ್ನಲಾದ ಎಂಡಿಎಂಎ ಅನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳನ್ನು ಕೇರಳದ ಕಾಸರಗೋಡು ಜಿಲ್ಲೆಯ ಮೊಹಮ್ಮದ್ ಹನೀಫ್, ಸೈಯದ್ ಫೌಜಾನ್​, ಸಿರಾಜುದ್ದೀನ್ ಅಬೂಬಕ್ಕರ್ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆಯಲ್ಲಿ 5,00,000 ರೂಪಾಯಿ ಮೌಲ್ಯದ 100 ಗ್ರಾಂ ಎಂಡಿಎಂಎ, 4000 ರೂಪಾಯಿ ನಗದು, ಒಂದು ಮಾರುತಿ ಸ್ವಿಫ್ಟ್ ಕಾರು, ಮೂರು ಮೊಬೈಲ್ ಫೋನ್‌ಗಳು ಮತ್ತು ಡಿಜಿಟಲ್ ತೂಕದ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಸೊತ್ತುಗಳ ಒಟ್ಟು ಮೌಲ್ಯ 10,94,500 ರೂಪಾಯಿ ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...