Breaking News

ಬ್ರಿಟಿಷ್‌ ನರ್ಸ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದ ಇಂಗ್ಲೆಂಡಿನ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌

ಲಂಡನ್: ಒಂದು ವರ್ಷದಲ್ಲಿ 7 ನವಜಾತ ಶಿಶುಗಳನ್ನು ಹತ್ಯೆಗೈದು, ಇನ್ನೂ 6 ಶಿಶುಗಳನ್ನ ಕೊಲ್ಲಲು ಪ್ರಯತ್ನಿಸಿದ್ದ 33 ವರ್ಷದ ಬ್ರಿಟಿಷ್ ನರ್ಸ್‌ಗೆ ಇಂಗ್ಲೆಂಡಿನ ಮ್ಯಾಂಚೆಸ್ಟರ್‌ ಕ್ರೌನ್‌ ಕೋರ್ಟ್‌ ಜೀವಾವಧಿ ಶಿಕ್ಷೆಯನು ವಿಧಿಸಿದೆ.ಆಕೆ ಇನ್ನು ಸಾಯುವವರೆಗೂ ಜೈಲಿನಲ್ಲೇ ಕೊಳೆಯಬೇಕುಎಂದು ಕೋರ್ಟ್‌ ತಿಳಿಸಿದೆ.

ನರ್ಸ್ ಲೂಸಿ ಲೆಟ್ಬಿಗೆ ಕ್ರೌನ್‌ ಕೋರ್ಟ್‌ನಲ್ಲಿ ಲಭ್ಯವಿರುವ ಅತ್ಯಂತ ಕಠಿಣ ಶಿಕ್ಷೆಯನ್ನ ವಿಧಿಸಲಾಗಿದೆ. ಲೂಸಿ ಲೆಟ್ಬಿ 2015ರ ಜೂನ್ ರಿಂದ 2016ರ ಜೂನ್ ನಡುವೆ ವಾಯವ್ಯ ಇಂಗ್ಲೆಂಡ್‌ನ ಕೌಂಟೆಸ್ ಆಫ್ ಚೆಸ್ಟರ್ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಕೊಲೆಗಳನ್ನ ಮಾಡಿದ್ದಾಳೆ.ಲೂಸಿ ಲೆಟ್ಬಿ ತನ್ನ ಆರೈಕೆಯಲ್ಲಿದ್ದ ಶಿಶುಗಳಿಗೆ ವಿಷಪೂರಿತ ಚುಚ್ಚುಮದ್ದು ನೀಡುತ್ತಿದ್ದಳು. ಜೊತೆಗೆ ಹಾಲಿನೊಂದಿಗೆ ವಿಷಪೂರಿತ ಲಿಕ್ವಿಡ್ ಬೆರಸುತಿದ್ದಳು. ಮಕ್ಕಳನ್ನು ಉಸಿರುಗಟ್ಟಿಸಿ, ದೈಹಿಕವಾಗಿ ಹಲ್ಲೆ ನಡೆಸಿ ಕೊಂದಿದ್ದಾಳೆ ಎಂದು ಪ್ರಾಸಿಕ್ಯೂಟರ್‌ಗಳು ಮ್ಯಾಂಚೆಸ್ಟರ್ ಕ್ರೌನ್ ಕೋರ್ಟ್‌ಗೆ ತಿಳಿಸಿದ್ದರು.ಈ ಹಿಂದೆ ಆಕೆಯ ನಿವಾಸದಲ್ಲಿ ತನಿಖೆ ನಡೆಸಿದಾಗ ಕೆಲ ಪತ್ರಗಳು ಪತ್ತೆಯಾಗಿದ್ದು, ಅದರಲ್ಲಿ “ನಾನು ದೆವ್ವ, ಅವಳನ್ನು ನೋಡಿಕೊಳ್ಳಲು ನಾನು ಯೋಗ್ಯವಲ್ಲದ ಕಾರಣ ಉದ್ದೇಶಪೂರ್ವಕವಾಗಿ ಕೊಂದಿದ್ದೇನೆ. ನಾನು ಕೆಟ್ಟವಳು, ಅದಕ್ಕಾಗಿಯೇ ಹಾಗೆ ಮಾಡಿದ್ದೇನೆ” ಮತ್ತು “ಇಂದು ನಿಮ್ಮ ಜನ್ಮದಿನ ಆದ್ರೆ ನೀವೇ ಇಲ್ಲ, ಅದಕ್ಕಾಗಿ ನಾನು ತುಂಬಾ ವಿಷಾದಿಸುತ್ತೇನೆ” ಎಂದು ಬರೆದಿದ್ದ ಪತ್ರಗಳು ಪತ್ತೆಯಾಗಿದ್ದವು. 2015 ರಲ್ಲಿ ನರ್ಸ್ ಲೂಸಿ ಲೆಟ್ಬಿ ಕೃತ್ಯ ಬೆಳಕಿಗೆ ಬಂದಿತ್ತು.ಈ ಘಟನೆ ಬೆಳಕಿಗೆ ಬಂದ ನಂತರ ಆಕೆಯನ್ನು ದೇಶದ ಅತ್ಯಂತ ಕೆಟ್ಟ ಬೇಬಿ ಸೀರಿಯಲ್ ಕಿಲ್ಲರ್ ಎಂದು ಪರಿಗಣಿಸಲಾಗಿತ್ತು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...