Breaking News

ಜಾತಿ ಗಣತಿ ಸೇರಿ 6 ಭರವಸೆ ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಮಧ್ಯಪ್ರದೇಶ :ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು.ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಜಾತಿ ಗಣತಿ ನಡೆಸಲಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡಲಾಗುವುದು . ಎಲ್‌ಪಿಜಿ 500 ರೂ.ಗೆ ಸಿಗಲಿದೆ. ಮಹಿಳೆಯರಿಗೆ ತಿಂಗಳಿಗೆ 1500 ರೂ. ಸಿಗಲಿದೆ. ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತರಲಿದ್ದೇವೆ. 100 ಯೂನಿಟ್‌ಗಳವರೆಗೆ ವಿದ್ಯುತ್ ಬಿಲ್ ಉಚಿತ. ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರ ಶಿಫಾರಸಿನ ಮೇರೆಗೆ ಮಂಜೂರಾದ ಬುಂದೇಲ್‌ಖಂಡ್ ಪ್ಯಾಕೇಜನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿಲ್ಲ. ಅವರು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಏನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.ಮೋದಿ ಮಾಡಿದ ಸಂತ ರವಿದಾಸ್ ಅವರ 100 ಕೋಟಿ ರೂ.ಗಳ ಸ್ಮಾರಕ ಮತ್ತು ದೇವಾಲಯದ ಶಂಕುಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ,  ಪ್ರಧಾನಿ ಮೋದಿಯವರು ಚುನಾವಣಾ ಸಂದರ್ಭದಲ್ಲಿ ಮಾತ್ರ ಸಂತ ರವಿದಾಸರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಆರೋಪಿಸಿದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...