Breaking News

ಅಭಿಮಾನಿಗಳತ್ತ ಮಧ್ಯದ ಬೆರಳು ತೋರಿಸಿದ ಗೌತಮ್ ಗಂಭೀರ್ ವ್ಯಾಪಕ ಆಕ್ರೋಶ

ಹೊಸದಿಲ್ಲಿ: ಏಷ್ಯಾ ಕಪ್ 2023 ರಲ್ಲಿ ನಡೆಯುತ್ತಿರುವ ಭಾರತ ಮತ್ತು ನೇಪಾಳ ಪಂದ್ಯದ ವೇಳೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ, ಬಿಜೆಪಿ ಸಂಸದ ಗೌತಮ್ ಗಂಭೀರ್ ವಿರಾಟ್ ಕೊಹ್ಲಿ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಇದೀಗ ಈ ಅನುಚಿತ ವರ್ತನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದು.ಪ್ರಸ್ತುತ ನಡೆಯುತ್ತಿರುವ ಏಷ್ಯಾ ಕಪ್​ನಲ್ಲಿ ಗೌತಮ್ ಗಂಭೀರ್ ಪ್ಯಾನೆಲಿಸ್ಟ್ ಮತ್ತು ಕಾಮೆಂಟೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನೇಪಾಳ ವಿರುದ್ಧದ ಪಂದ್ಯದ ವೇಳೆ ಮೈದಾನದಲ್ಲಿ ಕಾಣಿಸಿಕೊಂಡಿದ್ದ ಗಂಭೀರ್ ಸ್ಟೇಡಿಯಂಗೆ ಹಿಂತಿರುಗುತ್ತಿದ್ದಾಗ ಅಭಿಮಾನಿಗಳು ಕೊಹ್ಲಿ-ಕೊಹ್ಲಿ ಎಂದು ಘೋಷಣೆ ಕೂಗಿದರು.ಇದರಿಂದ ಕುಪಿತಗೊಂಡ ಗಂಭೀರ್ ಅಭಿಮಾನಿಗಳತ್ತ ಮಧ್ಯದ ಬೆರಳನ್ನು ತೋರಿಸಿದ್ದಾರೆ.ಗಂಭೀರ್ ವರ್ತನೆಗೆ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ವಿರಾಟ್ ಕೊಹ್ಲಿಯ ಹೆಸರು ಕೇಳುತ್ತಿದ್ದಂತೆ ಗಂಭೀರ್ ಕೆಂಡಮಂಡಲರಾಗಿದ್ದಾರೆ. ಅಷ್ಟೇ ಅಲ್ಲದೆ ತಮ್ಮ ಘನತೆಯನ್ನು ಮರೆತು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...