Breaking News

ಮಂಗಳೂರು ಪೊಲೀಸ್‌ ಠಾಣೆಯಲ್ಲಿ ಯುವತಿಯ ಆಕ್ರಮಣಕಾರಿ ವರ್ತನೆ

ಮಂಗಳೂರು: ನಗರದ ಪೊಲೀಸ್‌ ಠಾಣೆಯಲ್ಲಿ ಯುವತಿಯೋರ್ವಳು ಆಕ್ರಮಣಕಾರಿಯಾಗಿ ವರ್ತಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮಾದಕ ದ್ರವ್ಯ ವ್ಯಸನಿ ಎಂಬ ಶೀರ್ಷಿಕೆಯಲ್ಲಿ ವೈರಲ್‌ ಆಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌ ಅವರು, ಸೆ.1ರಂದು ಪಂಪ್‌ವೆಲ್‌ನಲ್ಲಿರುವ ಮೆಡಿಕಲ್‌ನಲ್ಲಿ ಓರ್ವ ಯುವತಿ ಆಕ್ರಮಣಕಾರಿ ರೀತಿಯಲ್ಲಿ ವರ್ತನೆ ಮಾಡುತ್ತಿರುವ ಬಗ್ಗೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ಲಭಿಸಿತ್ತು. ಆಕೆ ಮಾದಕ ದ್ರವ್ಯ ಸೇವನೆ ಮಾಡಿರಬೇಕೆಂಬ ಸಂದೇಹದಿಂದ ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಆಕೆ ಅಧಿಕಾರಿಗಳ ಮೇಲೆ ಆಕ್ರಮಣಕಾರಿಯಾಗಿ ವರ್ತಿಸಿದ್ದಳು. ಬಳಿಕ ಠಾಣೆಯ ಪೊಲೀಸ್‌ ಮಹಿಳಾ ಸಿಬಂದಿ ಜತೆ ಇಲಾಖಾ ವಾಹನದಲ್ಲಿ ಅಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ನಡೆಸಿದಾಗ ಡ್ರಗ್ಸ್‌ ವ್ಯಸನಿಯಲ್ಲ ಎಂದು ತಿಳಿದು ಬಂದಿದೆ. ಅನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...