Breaking News

INDIA ಒಕ್ಕೂಟದಿಂದ ಕೆಲ ಟಿವಿ ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು ಸಮನ್ವಯ ಸಮಿತಿಯ ಸಭೆಯಲ್ಲಿ ನಿರ್ಧರಿಸಿದ್ದಾರೆ

ನವದೆಹಲಿ: ಇಂಡಿಯಾ ಒಕ್ಕೂಟದ ನಾಯಕರು ಕೆಲ ಟಿವಿ ಕಾರ್ಯಕ್ರಮಗಳು ಮತ್ತು ನಿರೂಪಕರ ಕಾರ್ಯಕ್ರಮದಲ್ಲಿ ಭಾಗವಹಿಸದೆ ಬಹಿಷ್ಕಾರ ಹಾಕಲು INDIA ಒಕ್ಕೂಟದ ಸಮನ್ವಯ ಸಮಿತಿಯ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಇಂಡಿಯಾ ಒಕ್ಕೂಟದ ಮಾಧ್ಯಮ ವಿಭಾಗದ ಸಭೆ ನಡೆದಿದ್ದು, ದೇಶದ ಪ್ರಮುಖ ಸುದ್ದಿ ಸಂಸ್ಥೆಗಳ ಪತ್ರಕರ್ತರು, ಸಂಪಾದಕರು, ನಿರೂಪಕರು ನಡೆಸಿಕೊಡುವ ಶೋಗಳಿಗೆ ಇಂಡಿಯಾ ಒಕ್ಕೂಟದ ಪಕ್ಷಗಳ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ. ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್ ಖೇರಾ ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಅರ್ನಬ್ ಗೋಸ್ವಾಮಿ (ರಿಪಬ್ಲಿಕ್)
ನಾವಿಕಾ ಕುಮಾರ್ (ಟೈಮ್ಸ್ ನೌ)
ಅದಿತಿ ತ್ಯಾಗಿ (ಜೀ ನ್ಯೂಸ್)
ಅಮನ್ ಚೋಪ್ರಾ (ನ್ಯೂಸ್ 18)
ಆಮಿಷ್ ದೇವಗನ್ (ನ್ಯೂಸ್ 18)
ಆನಂದ್ ನರಸಿಂಹನ್ (ನ್ಯೂಸ್ 18)
ಅಶೋಕ್ ಶ್ರೀವಾಸ್ತವ್ (ಡಿಡಿ ನ್ಯೂಸ್)
ಸುಧೀರ್ ಚೌಧರಿ (ಆಜ್ ತಕ್)
ಚಿತ್ರಾ ತ್ರಿಪಾಠಿ (ಆಜ್ ತಕ್)
ರುಬಿಕಾ ಲಿಯಾಕತ್ (ಭಾರತ್ 24)
ಗೌರವ್ ಸಾವಂತ್ (ಇಂಡಿಯಾ ಟುಡೇ)
ಶಿವ್ ಅರೂರ್ (ಇಂಡಿಯಾ ಟುಡೇ)
ಪ್ರಾಚಿ ಪರಾಶರ್ (ಇಂಡಿಯಾ ಟಿವಿ)
ಸುಶಾಂತ್ ಸಿನ್ಹಾ (ಟೈಮ್ಸ್ ನೌ ನವಭಾರತ್)

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...