Breaking News

ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ: FIR ದಾಖಲು

ಉಡುಪಿ: ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಟಿಕೆಟ್ ಕೊಡಿಸುವ ನೆಪದಲ್ಲಿ ವಂಚನೆ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿ ಸಿಸಿಬಿ ವಿಚಾರಣೆ ಎದುರಿಸುತ್ತಿರುವ ಚೈತ್ರಾ ಕುಂದಾಪುರ ವಿರುದ್ಧ ಮತ್ತೊಂದು ವಂಚನೆ ಆರೋಪ ಕೇಳಿಬಂದಿದೆ. ಬಟ್ಟೆ ಅಂಗಡಿ ಇಟ್ಟು ಕೊಡುವುದಾಗಿ ಹೇಳಿ 5 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿದ್ದಾಗಿ ಆರೋಪಿಸಿ ಸುಧೀನ​ ಎಂಬುವರು ಬ್ರಹ್ಮಾವರ ವೃತ್ತ ವ್ಯಾಪ್ತಿಯ ಕೋಟ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಎಫ್ಐಆರ್​ ದಾಖಲಿಸಿದ್ದಾರೆ.

2015ರಲ್ಲಿ ಸುಧೀನ ಅವರಿಗೆ ಪರಿಚಯವಾಗಿದ  ಚೈತ್ರಾ ಕುಂದಾಪುರ. ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ ಶಾಸಕರ ನಿಕಟ ಸಂಪರ್ಕವಿದೆ ಎಂದು ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದ್ದಾಳೆ. ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದ ಸುದೀನ, ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿದ್ದರು.ಬಟ್ಟೆ ಅಂಗಡಿಗೆ ಹಣ ಪಡೆದು ನಿರ್ಮಾಣ ವಿಳಂಬವಾದಾಗ ಇನ್ನಷ್ಟು ಹಣದ ಬೇಡಿಕೆ ಇಟ್ಡ ಚೈತ್ರಾ, ಅಂಗಡಿ ನಿರ್ಮಣ ವಿಳಂಬವಾಗಿರುವುದಕ್ಕೆ ಸ್ಥಳೀಯ ಮುಖಂಡರಲ್ಲಿ ಮತುಕತೆ ನಡೆಸಿದ್ದು, ಅಂತಿಮ ಹಂತ ಎಂದು ನಂಬಿಸಿದ್ದಳು. ಕೊನೆಗೆ ಚುನಾವಣಾ ಪ್ರಚಾರ, ಭಾಷಣ, ಕಾರ್ಯಕಾರಣಿ ಸಭೆ, ಪಕ್ಷದ ಮುಖಂಡರ ಭೇಟಿ ನೆಪ ಹೇಳಿ ತಪ್ಪಿಸಿಕೊಳ್ಳುತ್ತಿದ್ದಳು. ಈ ವೇಳೆ ಸುಳ್ಳು ಅತ್ಯಾಚಾರ ಪ್ರಕರಣ ಕೊಡುತ್ತೇನೆ, ಬಾಡಿಗೆ ಗೂಂಡಾಗಳಿಂದ ಕೊಲೆ‌ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಹಲವರ ಮನವೊಲಿಕೆ ಬಳಿಕ‌ ಇದೀಗ ಸುಧೀನ ಅವರು ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಚೈತ್ರಾ ವಿರುದ್ಧ 506, 417, 420 ಐಪಿಸಿ‌ ಸೆಕ್ಷನ್ ಅಡಿ ಎಫ್​ಐಆರ್ ದಾಖಲಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...