Breaking News

MDMA ಮಾದಕ ವಸ್ತು ಸಹಿತ ಇಬ್ಬರ ಬಂಧನ

ಮಂಗಳೂರು:ನಗರದ ಕೆ.ಎಸ್. ರಾವ್ ರಸ್ತೆ ಪರಿಸರದಲ್ಲಿ ಅಕ್ರಮವಾಗಿ MDMA ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಉಪ್ಪಿನಂಗಡಿಯ ಪಡ್ಡ ಸೂರ್ಯ ಮನೆ ನಿವಾಸಿ ಪಿ.ಎಸ್. ಅಬ್ದುಲ್ ಅಜೀಜ್ (31) ಮತ್ತು ಸುರತ್ಕಲ್ ಕಾಟಿಪಳ್ಳ ನಿವಾಸಿ ಅಕ್ಷಿತ್ ಕುಮಾರ್(26) ಎಂಬ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಇಬ್ಬರಿಂದ್ದ ಒಟ್ಟು 35 ಗ್ರಾಂ ತೂಕದ ರೂ. 1,75,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ಫೋನ್ ಗಳು, 600ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 1,96,000 ರೂ. ಎಂದು ಅಂದಾಜಿಸಲಾಗಿದೆ. ಇಬ್ಬರು ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...