Breaking News

ಸೆ.26ಕ್ಕೆ ಬೆಂಗಳೂರು ಬಂದ್‌

ಬೆಂಗಳೂರು: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಸೂಚನೆ ಬಳಿಕ ತಮಿಳುನಾಡಿಗೆ ಪ್ರತಿ ದಿನ 5 ಸಾವಿರ ಕ್ಯೂಸೆಕ್‌ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26ಕ್ಕೆ ಬೆಂಗಳೂರು ನಗರ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿವೆ.ಸೆ.26ರಂದು ಬೆಂಗಳೂರು ಬಂದ್‌ ವೇಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್‌ವರೆಗೆ ಪ್ರತಿಭಟನಾ ರ್‍ಯಾಲಿ ನಡೆಯಲಿದೆ.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾತನಾಡಿದ ರೈತ ಮುಖಂಡ ಕುರುಬೂರು ಶಾಂತಕುಮಾರ್, ಕಾವೇರಿ ವಿಚಾರದಲ್ಲಿ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ.ಬಂದ್‌ ದಿನ ಕಾರ್ಮಿಕ ಸಂಘಟನೆಗಳು, ಐಟಿ ಕಂಪೆನಿಗಳು ಹಾಗೂ ನಾಗರಿಕರು ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.ಇದನ್ನು ಖಂಡಿಸಿ ಸೆ.26ರ ಮಂಗಳವಾರದಂದು ಬೆಂಗಳೂರು ಬಂದ್ ನಡೆಯಲಿದೆ ಎಂದು ಹೇಳಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...