Breaking News

41 ವರ್ಷಗಳ ಬಳಿಕ ಕುದುರೆ ಸವಾರಿಯಲ್ಲಿ ಚಿನ್ನ ಗೆದ್ದ ಭಾರತ

ಚೀನಾ: ಚೀನಾದ ಹ್ಯಾಂಗ್‌ ಝೂನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2023 ಕ್ರೀಡಾಕೂಟದಲ್ಲಿ 41 ವರ್ಷಗಳ ಬಳಿಕ ಭಾರತದ ತಂಡ ಕುದುರೆ ಸವಾರಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದೆ. ‌ಕುದುರೆ ಸವಾರಿ ಈವೆಂಟ್‌ನಲ್ಲಿ ಭಾರತ ತಂಡವು ಒಟ್ಟು 209.205 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಚೀನಾ 204.882 ರೊಂದಿಗೆ ಬೆಳ್ಳಿಯೊಂದಿಗೆ ಮತ್ತು ಹಾಂಗ್ ಕಾಂಗ್ ಚೀನಾ 204.852 ರೊಂದಿಗೆ 3ನೇ ಸ್ಥಾನದಲ್ಲಿ ಕಂಚಿನ ಪದಕ ಪಡೆದುಕೊಂಡಿದೆ.

ಸುದೀಪ್ತಿ ಹಜೇಲಾ, ಹೃದಯ್ ವಿಪುಲ್ ಛೇಡಾ, ಅನುಷ್ ಗರ್ವಾಲಾ ಮತ್ತು ದಿವ್ಯಕೃತಿ ಸಿಂಗ್ ಅವರ ಭಾರತ ತಂಡವು ಕುದುರೆ ಸವಾರಿಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದೆ.ಈ ಕ್ರೀಡೆಯಲ್ಲಿ 1982 ರ ಬಳಿಕ ಭಾರತಕ್ಕೆ ಸಿಕ್ಕ ಮೊದಲ ಚಿನ್ನದ ಪದಕ ಇದಾಗಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...