Breaking News

ಮೂವರು ವಿಜ್ಞಾನಿಗಳಿಗೆ 2023ರ ಭೌತಶಾಸ್ತ್ರದ ನೊಬೆಲ್‌ ಪ್ರಶಸ್ತಿ

ಸ್ವೀಡನ್ : ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ ಮಂಗಳವಾರ ಭೌತಶಾಸ್ತ್ರದ ಪ್ರಶಸ್ತಿ ಘೋಷಿಸಿದ್ದು ಅಮೆರಿಕದ ಪೆರ್ರಿ ಅಗೋಸ್ಟಿನಿ, ಜರ್ಮನಿಯ ಫೆರೆಂಕ್ ಕ್ರೌಸ್ ಮತ್ತು ಸ್ವೀಡನ್ ನ ಅನ್ನೆ ಎಲ್.ಹ್ಯೂಲಿಯರ್ ಅವರನ್ನು 2023ನೇ ಸಾಲಿನ ನೊಬೆಲ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ .

ಪೆರ್ರಿ ಅಗೋಸ್ಟಿನಿ ಅಮೆರಿಕದ ಕೊಲಂಬಸ್ ನ ದಿ ಓಹಿಯೋ ಸ್ಟೇಟ್ ಯೂನಿವರ್ಸಿಟಿಯ ಪ್ರೊಫೆಸರ್ ಆಗಿದ್ದರೆ, ಫೆರೆಂಕ್ ಕ್ರೌಸ್ ಜರ್ಮನಿಯ ಮ್ಯಾಕ್ಸ್ ಪ್ಲಾಂಕ್ ಇನ್ ಸ್ಟಿಟ್ಯೂಟ್ ಆಫ್ ಕ್ವಾಂಟಮ್ ಆಪ್ಟಿಕ್ಸ್ ಯೂನಿವರ್ಸಿಟಿಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಇನ್ನೊಬ್ಬ ವಿಜ್ಞಾನಿಯಾದ ಅನ್ನೆ ಹ್ಯೂಲಿಯರ್ ಅವರು ಸ್ವೀಡನ್ ಲುಂಡ್ ವಿಶ್ವವಿದ್ಯಾಲಯದ ಪ್ರೊಫೆಸರ್ ಆಗಿದ್ದಾರೆ.ವಿಜ್ಞಾನ ಲೋಕದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಎಂದೇ ಕರೆಯಲಾಗುವ ಈ ಪ್ರಶಸ್ತಿಯ ಆಯ್ಕೆಯನ್ನು ಸ್ವೀಡನ್‌ನಲ್ಲಿರುವ ಕ್ಯಾರೊಲಿನ್ ವೈದ್ಯಕೀಯ ವಿಶ್ವವಿದ್ಯಾಲಯದ ನೊಬೆಲ್ ಅಸೆಂಬ್ಲಿ ಆಯ್ಕೆ ಮಾಡಿದೆ. ಬಹುಮಾನ ವಿಜೇತರಿಗೆ 18.31 ಕೋಟಿ ನಗದು ಬಹುಮಾನ ರೂಪದಲ್ಲಿ ಸಿಗಲಿದೆ.

About gaitonlennon_rodrigues

Check Also

ಭೀಕರ ಕಾರು ಅಪಘಾತ : ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಗೆ ಗಾಯ

ಮೀರತ್ : ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್ ಕಾರು ಅಪಘಾತದ ಬಳಿಕ ಮತ್ತೊಬ್ಬ ಟೀಂ ಇಂಡಿಯಾದ ಮಾಜಿ ಆಟಗಾರ …

Leave a Reply

Your email address will not be published. Required fields are marked *

Translate »
error: Content is protected !!
Share to...