Breaking News

ಮಂಗಳೂರು ಮುಸ್ಲಿಮ್ ವಕೀಲೆಗೆ ಮಾನಸಿಕ ಕಿರುಕುಳ ಬಸ್ ಚಾಲಕ, ಕಂಡೆಕ್ಟರ್ ಬಂಧನ

ಮಂಗಳೂರು:ವೃತ್ತಿಯಲ್ಲಿ ವಕೀಲೆಯಾಗಿರುವ ಮಹಿಳೆಯೊಬ್ಬರು ಪಿವಿಎಸ್ ಸರ್ಕಲ್ ಬಳಿ ಬೋಂದೆಲ್ ನಿಂದ ಸ್ಟೆಟ್ ಬ್ಯಾಂಕ್ ಗೆ ತೆರಳುವ ರೂಟ್ ನಂಬರ್ 19, ಆಶೆಲ್ ಬಸ್ ನ್ನು ಹತ್ತಲು ಹೋಗಿದ್ದಾರೆ.ಈ ವೇಳೆ ಬಸ್ ಚಾಲಕ  ಎಕಾಏಕಿ ಬಸ್ ನ್ನು ಚಲಾಯಿಸಿದ್ದು, ಮಹಿಳೆ ರಸ್ತೆಗೆ ಬೀಳುವ ವೇಳೆ ಬಸ್ ನ ನಿರ್ವಾಹಕ ಮಹಿಳೆಯ ಕೈಯನ್ನು ಹಿಡಿದು ಎಳೆದು ಸಾರ್ವಜನಿಕರ ಮುಂದೆ ನೀವು ಮುಸ್ಲಿಂ ಹೆಂಗಸರಿಗೆ ತುಂಬಾ ಅಹಂಕಾರ, ಬೇಕಾದರೆ ನಮ್ಮ ಬಸ್ಸಲ್ಲಿ ಬರಬೇಕು ಇಲ್ಲದಿದ್ದರೆ ಇಳಿಯಬೇಕು ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.

ಎಂದು ವಕೀಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕ ಮತ್ತು ಚಾಲಕ ಇಬ್ಬರನ್ನೂ ಮಂಗಳೂರು ಪೂರ್ವ ಪೊಲೀಸರು ಪೊಲೀಸರು ಬಂಧಿಸಿ,6 ನೇ ಜೆ ಎಂ ಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.ಇಬ್ಬರಿಗೂ ಮಂಗಳೂರು ಆರನೇ ಜೆಎಂಎಫ್ ಸಿ ನ್ಯಾಯಾಲಯ 14ದಿನ ನ್ಯಾಯಾಂಗ ಬಂಧನ ವಿಧಿಸಿದೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...