Breaking News

ದಸರಾ ಉತ್ಸವದಲ್ಲಿ ಕಮಿಷನ್ ವಿವಾದದ ಬಗ್ಗೆ ಪಂ.ರಾಜೀವ ತಾರನಾಥ್‌ ಸ್ಪಷ್ಟನೆ

ನಾಡಹಬ್ಬ ದಸರಾ ಸಾಸ್ಕೃತಿಕ ಉತ್ಸವದಲ್ಲಿ ಕಾರ್ಯಕ್ರಮ ನೀಡಲು ಅಂತರಾಷ್ಟ್ರೀಯ ಖ್ಯಾತಿಯ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರನ್ನು ಆಹ್ವಾನಿಸಿದ ದಸರಾ ಅಧಿಕಾರಿಗಳು ಸಂಭಾವನೆಯಲ್ಲಿ ಕಮಿಷನ್‌ಗೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.

ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಸಂಭಾವನೆಯಲ್ಲಿ ಪಂಡಿತ ರಾಜೀವ್‌ ತಾರಾನಾಥ್‌ ಅವರ ಬಳಿ ಅಧಿಕಾರಿಗಳು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆನ್ನಲಾದ ಬಗ್ಗೆ ಪತ್ರಿಕೆಯೊಂದರಲ್ಲಿ ವಿಶೇಷ ವರದಿಯಾಗಿತ್ತು. ವರದಿಯನ್ನು ಸ್ವತಃ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್‌.ಸಿ ಮಹದೇವಪ್ಪ ಅವರು ಟ್ವೀಟ್ ಮಾಡಿ ಜಿಲ್ಲಾಧಿಕಾರಿಗೆ ತನಿಖೆಗೆ ಆದೇಶಿಸಿರುವುದಾಗಿ ಹೇಳಿದ್ದರು.
ಆದರೆ ಈ ಬಗ್ಗೆ ಸರೋದ್‌ ವಾದಕ ಪಂ.ರಾಜೀವ ತಾರನಾಥ್‌ ಅವರು ಪ್ರತಿಕ್ರಿಯಿಸಿದ್ದು  ನನ್ನ ಬಳಿ ಯಾವ ಅಧಿಕಾರಿಯೂ ಬಂದಿಲ್ಲ ಲಂಚ ಕೇಳಿಲ್ಲ ಎಂದು ತಮ್ಮನ್ನು ಭೇಟಿ ಮಾಡಿದ ಅಧಿಕಾರಿಗಳಿಗೆ ರಾಜೀವ್‌ ತಾರಾನಾಥ್‌ ಸ್ಪಷ್ಟಪಡಿಸಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...