Breaking News

ತಮಿಳುನಾಡಿನ ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಸ್ಪೋಟ 9 ಮಂದಿ ಸಾವು

ತಮಿಳುನಾಡಿನ ವಿರುದುನಗರ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದಲ್ಲಿರುವ ಎರಡು ಪಟಾಕಿ ತಯಾರಿಕಾ ಕಾರ್ಖಾನೆಗಳಲ್ಲಿ ಅವಳಿ ಸ್ಫೋಟ ಸಂಭವಿಸಿದ್ದು,ಘಟನೆಯಲ್ಲಿ ಕನಿಷ್ಠ 9 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ತಮಿಳುನಾಡಿನಲ್ಲಿ ಶಿವಕಾಶಿ ಬಳಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಮೊದಲ ಸ್ಫೋಟ ಸಂಭವಿಸಿದ್ದು, ಇದರಲ್ಲಿ ಒಬ್ಬರು ಮೃತಪಟ್ಟಿದ್ದಾರೆ.

ಇದಾದ ಕೆಲವೇ ನಿಮಿಷಗಳಲ್ಲಿ ಕಮ್ಮಪಟ್ಟಿ ಗ್ರಾಮದ ಇದೇ ಘಟಕದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಎರಡು ಸ್ಫೋಟದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಮೊದಲ ಸ್ಪೋಟ ಸಂಭವಿಸಿದ ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ಅಧಿಕಾರಿಗಳನ್ನು ಕಳುಹಿಸಲಾಗಿತ್ತು. ಇದರ ಬೆನ್ನಲ್ಲೇ ಅದೇ ಜಿಲ್ಲೆಯ ಮತ್ತೊಂದು ಘಟಕದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ.ಘಟನೆ ಬಳಿಕ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ ಸ್ಫೋಟಕ್ಕೆ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...