Breaking News

ತಮಿಳುನಾಡಿಗೆ ನ.1ರಿಂದ ಪ್ರತಿದಿನ 2,600 ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕಕ್ಕೆ ಆದೇಶ

ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನ.1ರಿಂದ 15ರವರೆಗೆ ಪ್ರತಿದಿನ 2,600 ಕ್ಯೂಸೆಕ್‌ ಕಾವೇರಿ ನೀರನ್ನು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ.ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಆದೇಶವನ್ನು ನೀಡಲಾಗಿದೆ. ಸಮಿತಿಯ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.ದೆಹಲಿಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆಗಳ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಸುಪ್ರೀಂ ಕೋರ್ಟ್‌ ಆದೇಶದಂತೆ ರಚಿಸಲಾದ ಕಾವೇರಿ ನೀರು ನಿಯಂತ್ರಣಾ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಪ್ರತಿ 15 ದಿನಗಳಿಗೊಮ್ಮೆ ಸಭೆಯನ್ನು ನಡೆಸಿ ನೀರು ಬಿಡುವ ವಿಚಾರಕ್ಕೆ ಕರ್ನಾಟಕಕ್ಕೆ ಆದೇಶ ನೀಡುತ್ತಿದೆ.ಸುಪ್ರೀಂಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾಗಿತ್ತು.ಇದಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ದೆಹಲಿಯಲ್ಲಿ ಕರ್ನಾಟಕದ ಸಂಸದರು ಮತ್ತು ಸಚಿವರ ಜೊತೆ ಸಭೆ ನಡೆಸಿದ್ದರು. ಜೊತೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದರು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...