Breaking News

ಉಮರ್ ಖಾಲಿದ್ ವಿರುದ್ದದ UAPA ಪ್ರಕರಣ: ಕೇಂದ್ರ ಸರಕಾರಕ್ಕೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

ಯುಎಪಿಎಯಡಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಸುಪ್ರೀಂಕೋರ್ಟ್‌ ಕೇಂದ್ರ ಸರಕಾರಕ್ಕೆ ನೊಟೀಸ್‌ ನೀಡಿದೆ.ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ(ಯುಎಪಿಎ) ವಿವಿಧ ನಿಬಂಧನೆಗಳಡಿ ಪ್ರಕರಣ ದಾಖಲಿಸಿರುವುದನ್ನು ಪ್ರಶ್ನಿಸಿ ಉಮರ್ ಖಾಲಿದ್ ಸಲ್ಲಿಸಿರುವ ಮನವಿಯ ಕುರಿತು ಸುಪ್ರೀಂಕೋರ್ಟ್ ಮಂಗಳವಾರ ಕೇಂದ್ರ ಸರಕಾರಕ್ಕೆ ನೊಟೀಸ್ ನೀಡಿ ಪ್ರತಿಕ್ರಿಯೆ ಕೇಳಿದೆ.ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠವು ಈ ಕುರಿತ ಅರ್ಜಿಗಳನ್ನು ನ.22ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.

ಫೆ.2020ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ಪಿತೂರಿಯಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ದಾಖಲಿಸಲಾದ ಪ್ರಕರಣದಲ್ಲಿ ಜಾಮೀನು ಕೋರಿ ಖಾಲಿದ್ ಸಲ್ಲಿಸಿದ ಮನವಿಯನ್ನು ಕೂಡ ಅದೇ ದಿನಾಂಕದಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.ಖಾಲಿದ್, ಶರ್ಜೀಲ್ ಇಮಾಮ್ ಮತ್ತು ಇತರ ಹಲವರ ವಿರುದ್ಧ ಫೆಬ್ರವರಿ 2020ರ ಗಲಭೆಯ ಮಾಸ್ಟರ್‌ಮೈಂಡ್‌ಗಳು ಎಂದು ಆರೋಪಿಸಿ ಭಯೋತ್ಪಾದನಾ-ವಿರೋಧಿ ಕಾನೂನು ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

About gaitonlennon_rodrigues

Check Also

ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ಕೊಲೆ ಯತ್ನ ಪ್ರಕರಣದಲ್ಲಿ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸುಪ್ರೀಂ ಕೋರ್ಟ್ ಅಮಾನತುಗೊಳಿಸಿದ ಸುಮಾರು ಒಂದು ತಿಂಗಳ ನಂತರ …

Leave a Reply

Your email address will not be published. Required fields are marked *

Translate »
error: Content is protected !!
Share to...