Breaking News

ರಾಜ್ಯಪಾಲರು ಬಿಲ್‌ಗೆ ಅಂಕಿತ ಹಾಕಲು ವಿಳಂಬದ ಬಗ್ಗೆ ಸುಪ್ರೀಂ ಅಸಮಾಧಾನ

ರಾಜ್ಯಪಾಲರು ಚುನಾಯಿತ ಪ್ರತಿನಿಧಿಗಳಲ್ಲ, ವಿಷಯ ಸುಪ್ರೀಂಕೋರ್ಟ್‌ಗೆ ತಲುಪುವ ಮುನ್ನವೇ ಆಯಾ ರಾಜ್ಯಗಳ ವಿಧಾನಸಭೆಗಳು ಅಂಗೀಕರಿಸಿದ ಮಸೂದೆಗಳ ಮೇಲೆ ರಾಜ್ಯಪಾಲರು ಕ್ರಮಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಸೋಮವಾರ ಹೇಳಿದೆ.ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ವಿಧೇಯಕಗಳನ್ನು ಅನುಮೋದಿಸುವಲ್ಲಿ ವಿಳಂಬ ಮಾಡಿದ್ದರ ವಿರುದ್ಧ ಪಂಜಾಬ್ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ತನ್ನ ಕಳವಳ ವ್ಯಕ್ತಪಡಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಪೀಠ, ಈ ಬಗ್ಗೆ ಪಂಜಾಬ್ ರಾಜ್ಯಪಾಲರು ಕೈಗೊಂಡ ಕ್ರಮಗಳ ಕುರಿತು ವರದಿಯನ್ನು ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿದೆ.ಬಿಲ್‌ ವಿಚಾರ ಸುಪ್ರೀಂಕೋರ್ಟ್‌ಗೆ ಬರುವ ಮೊದಲೇ ರಾಜ್ಯಪಾಲರು ಅದಕ್ಕೆ ಸಹಿ ಮಾಡಿ ವಿಲೇವಾರಿ ಮಾಡಬೇಕು. ರಾಜ್ಯಪಾಲರು ಸ್ವಲ್ಪ ಆತ್ಮವಲೋಕನ ಮಾಡುವ ಅಗತ್ಯವಿದೆ. ಅವರು ಜನರ ಚುನಾಯಿತ ಪ್ರತಿನಿಧಿಗಳಲ್ಲ ಎಂದು ಸುಪ್ರೀಂ ಕೋರ್ಟ್ ಪೀಠವು ವಿಚಾರಣೆಯ ಸಂದರ್ಭದಲ್ಲಿ ಹೇಳಿದೆ.ವಿಚಾರಣೆಯ ಸಂದರ್ಭದಲ್ಲಿ ಪಂಜಾಬ್ ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ಮೆಹ್ತಾ, ಪುರೋಹಿತ್ ಅವರು ತಮ್ಮ ಮುಂದೆ ಇಟ್ಟಿರುವ ಮಸೂದೆಗಳ ಮೇಲೆ ಕ್ರಮ ಕೈಗೊಂಡಿದ್ದಾರೆ ಮತ್ತು ರಾಜ್ಯ ಸರ್ಕಾರದ ಮನವಿಯು ಅನಗತ್ಯ ದಾವೆಯಾಗಿದೆ ಎಂದು ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿದ್ದರು.

About gaitonlennon_rodrigues

Check Also

ಮೈ ಲಾರ್ಡ್’ ಎನ್ನುವುದನ್ನು ನಿಲ್ಲಿಸಿ, ನನ್ನ ಅರ್ಧ ಸಂಬಳ ನೀಡುತ್ತೇನೆ: ಸುಪ್ರೀಂ ಕೋರ್ಟ್ ನ್ಯಾಯಾಧೀಶರು

ನ್ಯಾಯಾಂಗ ಪ್ರಕ್ರಿಯೆಯಲ್ಲಿ ವಕೀಲರು ಪದೇ ಪದೇ “ಮೈ ಲಾರ್ಡ್” ಮತ್ತು “ಯುವರ್ ಲಾರ್ಡ್‌ಶಿಪ್ಸ್” ಎಂದು ಸಂಬೋಧಿಸುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು …

Leave a Reply

Your email address will not be published. Required fields are marked *

Translate »
error: Content is protected !!
Share to...