Breaking News

ಕರಾವಳಿ

Ut wisi luctus ullamcorper. Et ullamcorper sollicitudin elit odio consequat mauris, wisi velit tortor semper vel feugiat dui, ultricies lacus. Congue mattis luctus, quam orci mi semper

ಮಂಗಳೂರು: 77ನೇ ಸ್ವಾತಂತ್ರ್ಯೋತ್ಸವ – ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ಮಂಗಳೂರು: ಇಂದು ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ …

Read More »

ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ..!

ಮಂಗಳೂರು: ‘ಡ್ರಗ್ಸ್ ಫ್ರಿ ಮಂಗಳೂರು’  ಅಭಿಯಾನದ ಅಂಗವಾಗಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಚರಣೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ಕೋಡಿಕಲ್ ನಿವಾಸಿ ಮೊಹಮ್ಮದ್ ಅಝೀಝ್ ಯಾನೆ ಅಜೀಜ್ (40) ಬಂಧಿತ ಆರೋಪಿ. ಕಂಕನಾಡಿ- ಪಂಪ್‌ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಆತನಿಂದ 50,000 ರೂಪಾಯಿ …

Read More »

ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಪಂಪ್‌ವೆಲ್,ಮೆಂಡನ್ ಮೇಲೆ ಪ್ರಕರಣ ದಾಖಲು..!

ಉಡುಪಿ: ಪ್ರಚೋದನಕಾರಿ ಭಾಷಣ ಹಿನ್ನೆಲೆ ಇಬ್ಬರು ಹಿಂದೂ ಮುಖಂಡರ ಮೇಲೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಗುರುವಾರದಂದು ಉಡುಪಿ ನಗರದಲ್ಲಿ ವಿಶ್ವ ಹಿಂದು ಪರಿಷತ್‌, ಭಜರಂಗದಳ ಹಾಗೂ ವಿವಿಧ ಹಿಂದು ಸಂಘಟನೆಗಳಿಂದ ಉಡುಪಿಯ ನೇತ್ರಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನೆಯಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಜರಂಗದಳ ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್ ಅವರು ಉಗ್ರ ಭಾಷಣ …

Read More »

ಉಡುಪಿ: ಕಾಲೇಜು ಶೌಚಾಲಯ ಚಿತ್ರೀಕರಣ – ಸಂತ್ರಸ್ತೆಯ ಹೇಳಿಕೆ ಪಡೆದ ನ್ಯಾಯಾಲಯ

ಉಡುಪಿ: ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ಮುಂದುವರಿದಿದ್ದು, ಪ್ರಕರಣದ ಸಂತ್ರಸ್ತ ವಿದ್ಯಾರ್ಥಿನಿಯಿಂದ ನ್ಯಾಯಾಲಯವು ಹೇಳಿಕೆ ಪಡೆದುಕೊಂಡಿದೆ. ಪೊಲೀಸರು ಗೌಪ್ಯವಾಗಿ ಸಂತ್ರಸ್ತ ವಿದ್ಯಾರ್ಥಿನಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಸಾಕಷ್ಟು ಮನವಿಗಳು ಬರುತ್ತಿವೆ ಎಂದು ಇಲಾಖೆ ಮೂಲಗಳಿಂದ ತಿಳಿದು ಬಂದಿದೆ.ಈ ಮಧ್ಯೆ ಚಿತ್ರೀಕರಣ ಮಾಡಿದ್ದರು ಎನ್ನಲಾದ ಮೊಬೈಲ್ ಗಳನ್ನು ಪ್ರಯೋಗಾಲಯಕ್ಕೆ ಕಳಿಸಲಾಗಿದ್ದು …

Read More »

ಉಳ್ಳಾಲ: ಸರಣಿ ಕಳ್ಳತನ,ಸಿಸಿಟಿವಿ ಡಿವಿಆರ್ ಕಿತ್ತು ಅಂಗಡಿಯಲ್ಲೇ ಬಿಟ್ಟು ಹೋದ ಮರೆಗುಳಿ ಕಳ್ಳ

ಉಳ್ಳಾಲ: ತೊಕ್ಕೊಟ್ಟು ಒಳಪೇಟೆ ಮತ್ತು ಜಪ್ಪಿನ ಮೊಗರುವಿನ ವಾಣಿಜ್ಯ ಮಳಿಗೆಗಳಲ್ಲಿ ಸರಣಿ ಕಳ್ಳತನ ನಡೆದಿದ್ದು,ಸಿಸಿಟಿವಿ ಡಿವಿಆರ್ ಅನ್ನು ಕಿತ್ತ ಕಳ್ಳ ಅದನ್ನ ಮರೆತು ಅಂಗಡಿಯಲ್ಲೇ ಬಿಟ್ಟು ಹೋಗಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಪೊಲೀಸರಿಗೆ ಲಭಿಸಿದೆ. ತೊಕ್ಕೊಟ್ಟು ಒಳ ಪೇಟೆಯ ಲಕ್ಷ್ಮೀ ಕ್ಯಾಂಟೀನ್ ,ಪಕ್ಕದ ಪಾತ್ರೆಯ ಅಂಗಡಿ ಮತ್ತು ಮೊಬೈಲ್ ಅಂಗಡಿಗಳಲ್ಲಿ ಕಳ್ಳತನ ನಡೆದಿದ್ದು ನಗದನ್ನ ದೋಚಲಾಗಿದೆ.ಪಾತ್ರೆಯ ಅಂಗಡಿಗೆ ಕಳ್ಳನೋರ್ವ ಕನ್ನ ಹಾಕುವ ದೃಶ್ಯ ಒಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮೇಲ್ಛಾವಣಿಯ ಹಂಚು …

Read More »

ಬೆಳ್ತಂಗಡಿ: ಜಿಂಕೆಗಳ ಹಿಂಡಿನಿಂದ ದಾಳಿ; ಎರಡು ಆಡುಗಳು ಸಾವು

ಬೆಳ್ತಂಗಡಿ: ಜಿಂಕೆಗಳ ಹಿಂಡು ದಾಳಿ ಮಾಡಿದ ಪರಿಣಾಮ ಎರಡು ಆಡುಗಳು ಸಾವನ್ನಪ್ಪಿದ ಘಟನೆ ಮುಂಡಾಜೆಯ ಪರಮುಖದಲ್ಲಿ ನಡೆದಿದೆ. ಪ್ರಶಾಂತ ಪೂಜಾರಿಯವರು ತಮ್ಮ ಗದ್ದೆಯಲ್ಲಿ ಆಡುಗಳನ್ನು ಮೇಯಲು ಬಿಟ್ಟಿದ್ದರು. ಈ ವೇಳೆ ಸಂದರ್ಭ ಜಿಂಕೆಗಳ ಗುಂಪೊಂದು ದಾಳಿ ಮಾಡಿ ಆಡುಗಳಿಗೆ ಹಾಯ್ದ ಪರಿಣಾಮ ಎರಡು ಆಡುಗಳು ಸತ್ತಿವೆ.ಇದರಿಂದ ಸುಮಾರು 15 ಸಾವಿರ ರೂ. ಮೌಲ್ಯ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಜಿಂಕೆಗಳು ಕೃಷಿ ಜಮೀನುಗಳಿಗೆ ನುಗ್ಗುತ್ತಿರೋದರಿಂದ ಕೃಷಿಕರು ಈ ಬಾಗದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. …

Read More »

ಕಾರ್ಕಳ: ನೈತಿಕ ಪೊಲೀಸ್‌ಗಿರಿ – ಐವರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಬಂಧನ

ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಆರೋಪಿಗಳು ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ …

Read More »

ಉಡುಪಿ ವಿಡಿಯೊ ಪ್ರಕರಣ; ಎಸ್‌‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ-ಸಿಎಂ ಸಿದ್ದರಾಮಯ್ಯ

ಮಂಗಳೂರು:ಉಡುಪಿ ವಿಡಿಯೊ ಪ್ರಕರಣವನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ಮಾಡುತ್ತಿದ್ದು, ಇದರಿಂದಾಗಿ ಪ್ರಕರಣವನ್ನು ಎಸ್‌‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿ ಎಫ್ ಐ ಆರ್ ಆಗಿದೆ.ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ.ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಪ್ರಕರಣವನ್ನು …

Read More »

ಕಾರ್ಕಳ: ಗಾಂಜಾ ಮಾರಾಟ-ನಾಲ್ವರು ಆರೋಪಿಗಳ ಬಂಧನ..!

ಕಾರ್ಕಳ: ಕಾರ್ಕಳ ತಾಲೂಕು ವ್ಯಾಪ್ತಿಯಲ್ಲಿ ರಾಜಾರೋಷವಾಗಿ ಗಾಂಜಾ ಮಾರಾಟವಾಗುತ್ತಿದ್ದು, ಕೃತ್ಯದಲ್ಲಿ ಭಾಗಿಯಾಗಿದ್ದವರನ್ನು ಹೆಡೆಮುರಿ ಕಟ್ಟಲು ಮುಂದಾಗಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ವರ್ತಮಾನದ ಮೇರೆಗೆ ಕಾರ್ಕಳ ನಗರ ಠಾಣಾ ಪೊಲೀಸರು ಮಿಯ್ಯಾರು ಗ್ರಾಮದ ಕಾರೋಲ್‌ಗುಡ್ಡೆ ಪರಿಸರದಲ್ಲಿ ಕಾರ್ಯಚರಣೆ ನಡೆಸಿದ್ದಾರೆ. ಕಲೋಲ್ ಗುಡ್ಡೆಯ ನರೇಂದ್ರ(40), ಪುಲ್ಕೇರಿ ಮಸೀದಿ ಬಳಿಯ ಸಿರಾಜ್(21), ತೆಳ್ಳಾರು ಮೇಲಿನಪಲ್ಕೆಯ ಅಬ್ದುಲ್ ಆರೀಫ್(26), ಬೈಲೂರು ಬಾಣಾಲು ಜೀವನ್ (25) ಎಂಬವರನ್ನು ಪೋಲಿಸರು ಬಂಧಿಸಿದ್ದಾರೆ. ಜು. …

Read More »

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರಗತಿ ಪರಿಶೀಲನೆ ನಡೆಸಲು ಇಂದು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅವರಿಗೆ ಜಿಲ್ಲಾಡಳಿತದ ವತಿಯಿಂದ ಸ್ವಾಗತ ಕೋರಲಾಯಿತು.

Read More »
Translate »
error: Content is protected !!