Breaking News

ರಾಜಕೀಯ

ರಾಹುಲ್ ಗಾಂಧಿಯಾ ಸಂಸದ ಸ್ಥಾನ ಮರುಸ್ಥಾಪನೆಯು ಸ್ವಾಗತಾರ್ಹ ಹೆಜ್ಜೆಯಾಗಿದೆ: ಸಂತಸ ವ್ಯಕ್ತಪಡಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಮರುಸ್ಥಾಪಿಸುವ ನಿರ್ಧಾರವು ಸ್ವಾಗತಾರ್ಹ ಹೆಜ್ಜೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಸಂತಸ ವ್ಯಕ್ತಪಡಿಸಿದರು.   ರಾಹುಲ್ ಗಾಂಧಿ ಅವರು ಸಂಸದ ಸ್ಥಾನದ ಅನರ್ಹತೆಯನ್ನು ಲೋಕಸಭಾ ಸಚಿವಾಲಯ ರದ್ದುಗೊಳಿಸಿದ ಬಳಿಕ ಮಲ್ಲಿಕಾರ್ಜುನ್ ಖರ್ಗೆ ಅವರು ಪಕ್ಷದ ನಾಯಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ರಾಹುಲ್ ಗಾಂಧಿ ಅವರ ಸಂಸದ ಸ್ಥಾನ …

Read More »

‘ಶೀಘ್ರದಲ್ಲೇ 108 ಆರೋಗ್ಯ ಸೇವೆಗೆ ಹೊಸ ರೂಪ’ – ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: 108 ಆರೋಗ್ಯ ಸೇವೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 108 ಆರೋಗ್ಯ ಸೇವೆಯ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಮಾತನಾಡಿದ ಅವರು, 90 ದಿನಗಳೊಳಗೆ ಆ್ಯಂಬುಲೆನ್ಸ್‌ ಸೇವೆಯಲ್ಲಿ ಉತ್ತಮ ಫ‌ಲಿತಾಂಶ ಬೇಕು. ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಹನ ಸೇವೆ ಪಡೆಯಲು ಪರಿತಪಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನು 2017ರ ಬಳಿಕ …

Read More »

‘ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ’ – ಡಿಕೆಶಿ

ಬೆಂಗಳೂರು : ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಮೊದಲ ಕ್ಯಾಬಿನೆಟ್‌ನಲ್ಲಿ ಗ್ಯಾರಂಟಿ ಯೋಜನೆ ತರುತ್ತೇವೆ ಎಂದು ಬೆಂಗಳೂರಿನಲ್ಲಿ ನಿಯೋಜಿತ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ತಿಳಿಸಿದ್ದಾರೆ. ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುವ ನಿಟ್ಟಿನಲ್ಲಿ ಈಗಾಗಲೇ ರಾಜ್ಯದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದ್ದು, ದೆಹಲಿಗೆ ಡಿ.ಕೆ.ಶಿವಕುಮಾರ್‌ ತೆರಳುವ ಮುನ್ನವೇ ಪದಗ್ರಹಣ ನಡೆಯುವ ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ …

Read More »

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಮಿಶ್ರಾ, ವಿಶ್ವನಾಥನ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಮಣ ವಿಶ್ವನಾಥನ್ ಅವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಅವರು ಶುಕ್ರವಾರ ಸುಪ್ರೀಂ ಕೋರ್ಟ್‌ನ ಸಭಾಂಗಣದಲ್ಲಿ ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಇಬ್ಬರೂ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ, ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಧೀಶರ ಸಂಖ್ಯೆ 34 ಕ್ಕೆ ತಲುಪಿತು. ಆದಾಗ್ಯೂ, ಜೂನ್‌ನಲ್ಲಿ ನಿವೃತ್ತರಾಗಲಿರುವ …

Read More »

ಗುಜರಾತ್‌: ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ಅಪಘಾತದಲ್ಲಿ ಮೃತ್ಯು

ಅಹಮದಾಬಾದ್: ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ(69) ಅವರು ರಸ್ತೆ ಅಪಘಾತದಲ್ಲಿ ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ನ ಅವರು ಪ್ರಯಾಣಿಸುತ್ತಿದ್ದ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ತಮ್ಮ ಗ್ರಾಮದಿಂದ ಸಾವರಕುಂಡ್ಲಾಗೆ ಹಿಂತಿರುಗುತ್ತಿದ್ದಾಗ ವಂಡಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ವಘಾಸಿಯಾ ಅವರು ಸಾವರಕುಂಡ್ಲಾ ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ …

Read More »

ದಲಿತರನ್ನು ಉಪಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಕಾಂಗ್ರೆಸ್‌ಗೆ ಸಂಕಷ್ಟ: ಜಿ ಪರಮೇಶ್ವರ್ ಎಚ್ಚರಿಕೆ

ಬೆಂಗಳೂರು: ಸಿಎಂ ಸ್ಥಾನದ ನಂತರ ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್‌ನ ಹಿರಿಯ ನಾಯಕ ಜಿ ಪರಮೇಶ್ವರ, ದಲಿತರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡದಿದ್ದಲ್ಲಿ ವ್ಯತಿರಿಕ್ತ ಪರಿಣಾಮ ಉಂಟಾಗಿ ಪಕ್ಷಕ್ಕೆ ತೊಂದರೆಯಾಗಲಿದೆ ಎಂದು ಪಕ್ಷದ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ 71 ವರ್ಷದ ದಲಿತಸಮುದಾಯದ ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿದ್ದರು. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ ಎಂಟು ವರ್ಷಗಳ …

Read More »

ನಾಳೆ ಸಿದ್ದು, ಡಿಕೆಶಿ ಪ್ರಮಾಣ ವಚನ: ಸ್ಟಾಲಿನ್‌, ನಿತೀಶ್‌, ಪವಾರ್‌, ಠಾಕ್ರೆ, ಫಾರೂಕ್‌ಗೆ ಆಹ್ವಾನ

ಬೆಂಗಳೂರು: ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮೇ 20ರಂದು ಮಧ್ಯಾಹ್ನ 12.30 ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಭಾಗಿಯಾಗುವಂತೆ ವಿವಿಧ ರಾಜ್ಯಗಳ ಬಿಜೆಪಿಯೇತರ ಮುಖ್ಯಮಂತ್ರಿಗಳು ಹಾಗೂ ಪಕ್ಷಗಳ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಕೆಲ ಸಚಿವರು ಸಹ ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞೆ ಸ್ವೀಕರಿಸಲಿದ್ದು, ಲಕ್ಷಕ್ಕೂ ಹೆಚ್ಚಿನ …

Read More »

ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ: 30-30 ತಿಂಗಳು ಸಿಎಂ ಪಟ್ಟ

ಬೆಂಗಳೂರು: ಕರ್ನಾಟಕ ಸಿಎಂ ಆಯ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಆಯ್ಕೆಯಾಗಿದ್ದರೆ, ಡಿಕೆ ಶಿವಕುಮಾರ್ ಗೆ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಈ ಆಯ್ಕೆ ನಡೆದಿರೋದು ಅಧಿಕಾರ ಹಂಚಿಕೆ ಸೂತ್ರದಿಂದ ಎಂದು ಹೇಳಲಾಗುತ್ತಿದೆ.   ಕಾಂಗ್ರೆಸ್ ಪಕ್ಷದಕ್ಕೆ ಸ್ಪಷ್ಟ ಬಹುಮತ ವಿಧಾನಸಭಾ ಚುನಾವಣೆಯಲ್ಲಿ ಬಂದು ಐದು ದಿನಗಳ ನಂತ್ರ, ಇಂದು ಕರ್ನಾಟಕ ಸಿಎಂ ಆಯ್ಕೆ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ …

Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಾರೋಗ್ಯದಿಂದ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಬುಧವಾರ (ಮೇ 10) ಮಧ್ಯರಾತ್ರಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿ.ಟಿ ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳಿಂದಲೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿ, ವೀಡಿಯೋ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ …

Read More »

ವಿಧಾನಸಭಾ ಚುನಾವಣೆ 2023: ರಾಜ್ಯಾದ್ಯಂತ ಮತದಾನ ಪ್ರಕ್ರಿಯೆ ಆರಂಭ; ಕಡ್ಡಾಯವಾಗಿ ವೋಟ್ ಮಾಡಿ

ಬೆಂಗಳೂರು: 16ನೇ ವಿಧಾನಸಭೆ ರಚನೆಗೆ ಇಂದು (ಮೇ 10) ಬುಧವಾರ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು 58,545 ಮತಗಟ್ಟೆಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಇಂದು ಜನಪ್ರತಿನಿಧಿಗಳ ಭವಿಷ್ಯ ನಿರ್ಧಾರವಾಗಲಿದೆ. 2,430 ಪುರುಷರು, 184 ಮಹಿಳೆಯರು, ಒಬ್ಬ ತೃತೀಯ ಲಿಂಗಿ ಸೇರಿ ಒಟ್ಟು 2,615 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಒಟ್ಟು 5,30,85,566 ಮಂದಿ ಮತದಾನಕ್ಕೆ ಅರ್ಹರಾಗಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸರ್ವ …

Read More »
Translate »
error: Content is protected !!