Breaking News

ರಾಜ್ಯ ಸುದ್ದಿ

ಮೂಡಿಗೆರೆ: ಕೂದಲೆಳೆ ಅಂತರದಲ್ಲಿ ಪಾರಾದ ಅರಣ್ಯ ಅಧಿಕಾರಿಗಳು

ಕೊಟ್ಟಿಗೆಹಾರ: ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ಅರಣ್ಯ ಅಧಿಕಾರಿಗಳನು ಅಟ್ಟಿಸಿಕೊಂಡು ಬಂದಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.   ಮಲೆಮನೆ ಮೇಗೂರು ಆಲೇಕಾನ್ ಗ್ರಾಮದಲ್ಲಿ ಕಾಡಾನೆ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಆನೆ ಕಾರ್ಯ ಪಡೆಯ ಉಪವಲಯ ಅರಣ್ಯಾಧಿಕಾರಿಗಲು ಗ್ರಾಮಸ್ಥರೊಂದಿಗೆ ಸೋಮವಾರ ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ನಡೆಸುವ ವೇಳೆ ಮೇಗೂರಿನ ಅತ್ತಗುಣಿ ಸಮೀಪ ಕಾಡಾನೆ ಅಟ್ಟಿಸಿಕೊಂಡು ಬಂದಿದ್ದು ಅರಣ್ಯ ಅಧಿಕಾರಿಗಳು ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಮಲೆಮನೆ, ಮೇಗೂರು, ಆಲೇಕಾನ್ ಮುಂತಾದ ಕಡೆಗಳಲ್ಲಿ ಕಾಡಾನೆ …

Read More »

ಸ್ವಂತ ಕಾರು ಇರುವವರಿಗೆ BPL ಕಾರ್ಡ್ ಇಲ್ಲ: ಸಚಿವ ಕೆ.ಎಚ್‌ ಮುನಿಯಪ್ಪ

ಬೆಂಗಳೂರು: ಸ್ವಂತ ಕಾರು ಇರುವವರಿಗೆ ‘BPL’ ಕಾರ್ಡ್ ನೀಡದಿರಲು ಚಿಂತನೆ ನಡೆಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ಧಾರೆ. ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ವೈಟ್ ಬೋರ್ಡ್ ಕಾರು ಹೊಂದಿರುವ ಕುಟುಂಬದ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ, ಯೆಲ್ಲೋ ಬೋರ್ಡ್ ಕಾರು ಹೊಂದಿರುವವರ ಬಿಪಿಎಲ್ ಕಾರ್ಡ್ ರದ್ದನ್ನು ವಾಪಸ್ಸು ಪಡೆಯಲು ಚಿಂತನೆ ನಡೆಸಲಾಗುತ್ತಿದೆ ಎಂದರು. ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವ …

Read More »

ಗೃಹ ಜ್ಯೋತಿ ಯೋಜನೆ: ರಾಜ್ಯದ ‘1.42 ಕೋಟಿ ಗ್ರಾಹಕ’ರು ಪಡೆಯಲಿದ್ದಾರೆ ‘ಶೂನ್ಯ ಬಿಲ್’

ಬೆಂಗಳೂರು: ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ಬಿಲ್ ಪಡೆಯುವ ಯೋಜನೆಯ ಇದೇ ಆಗಸ್ಟ್‌ 1ರಿಂದ ಅಂದ್ರೆ ನಿನ್ನೆಯಿಂದ ಶುರುವಾಗಿದೆ. ಆಗಸ್ಟ್‌ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಯೋಚನೆಗೆ ಚಾಲನೆ ನೀಡಲಿದ್ದಾರೆ ಅಂತ ನಿನ್ನೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮಾಹಿತಿ ನೀಡಿದ್ದಾರೆ. ಈ ನಡುವೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಅರ್ಹರಾಗಿದ್ದೇವೆಯೇ ಎನ್ನುವುದನ್ನು ಹೇಗೆ ತಿಳಿದುಕೊಳ್ಳಬಹುದು? ನಮಗೂ ಕೂಡ ಶೂನ್ಯ ಬಿಲ್‌ ಬರಲಿದ್ಯ ಎನ್ನುವುದು ಹಲವು …

Read More »

ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ ಹಂಚುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಅರೆಸ್ಟ್..!

ಮೈಸೂರು: ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್​ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ. ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್​ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಎಸಿಪಿ ಗಜೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ.ದಾಳಿಯ ಸಂದರ್ಭದಲ್ಲಿ …

Read More »

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಸ್ಪದ ಸಾವು

ಚಿಕ್ಕಬಳ್ಳಾಪುರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ  ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ.ವಿದ್ಯಾರ್ಥಿನಿ ತನುಶ್ರೀ ಮೃತ ಪಟ್ಟಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಗ್ಗೆ ತೀವ್ರ ಅಸ್ವಸ್ಥಳಾಗಿದ್ದರಿಂದ ವಿದ್ಯಾರ್ಥಿನಿಯನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿಲಾಯಿತು. ಆದರೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ವಿದ್ಯಾರ್ಥಿನಿ ತನುಶ್ರೀ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Read More »

ವಿಧಾನಸಭೆಯಲ್ಲಿ ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದ 10 ಬಿಜೆಪಿ ಸದಸ್ಯರ ಅಮಾನತು

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಹೈಡ್ರಾಮಾ ನಡೆದಿದ್ದು, ಉಪ ಸಭಾಪತಿ ಮೇಲೆ ಕಾಗದ ಪತ್ರ ಎಸೆದು ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನಲೆಯಲ್ಲಿ ಬಿಜೆಪಿಯ 10 ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಬಿಜೆಪಿಯ ಡಾ.ಅಶ್ವತ್ಥ್​​ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಮತ್ತು ಭರತ್ ಶೆಟ್ಟಿ ಅವರನ್ನು ಸ್ಪೀಕರ್ ಯುಟಿ ಖಾದರ್ ಅವರು ಅಮಾನತು ಮಾಡಿದ್ದಾರೆ. ಈ 10 …

Read More »

ಅಧಿವೇಶನದಲ್ಲಿ ಉಪ ಸಭಾಪತಿ ಮೇಲೆ ಕಾಗದ ಹರಿದು ಬಿಸಾಕಿದ ಬಿಜೆಪಿ ಶಾಸಕರು!

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದ ಘಟನೆ ನಡೆದಿದೆ. ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಸದನದ ಬಾವಿಗಿಳಿದು ಧರಣಿ ನಡೆಸಿದ್ದು, ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು. ಇನ್ನು ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು. ರಾಜಯಃ ಸರಕಾರದ …

Read More »

ವಿಚಾರಣೆ ವೇಳೆ ಸಿಸಿಬಿ ಮುಂದೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರರು

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಶಂಕಿತ ಉಗ್ರರ ಪ್ಲ್ಯಾನ್ ವಿಫಲಗೊಳಿಸಿದ್ದಾರೆ. ಮಡಿವಾಳದ FSL ಆವರಣದ ಇಂಟ್ರಾಗೇಷನ್ ಸೆಲ್​ನಲ್ಲಿ ವರು ಶಂಕಿತ ಭಯೋತ್ಪಾದಕರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿದ್ದು, ಈ ವೇಳೆ ಸ್ಫೋಟಕ ಅಂಶಗಳನ್ನು ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಸ್​​, ಹೋಟೆಲ್​​, ಬಸ್​​ ನಿಲ್ದಾಣಗಳಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಲಾಗಿತ್ತು ಎಂದು ವಿಚಾರಣೆ ವೇಳೆ ಶಂಕಿತ ಉಗ್ರರು ಮುಂದೆ ಬಾಯ್ಬಿಟ್ಟಿದ್ದಾರೆ. …

Read More »

ಖ್ಯಾತ ಗಣಿತಶಾಸ್ತ್ರಜ್ಞೆ ಡಾ. ಮಂಗಳಾ ನಾರ್ಲಿಕರ್ ನಿಧನ

ಪುಣೆ: ಖ್ಯಾತ ಖಗೋಳ ಭೌತಶಾಸ್ತ್ರಜ್ಞ ಡಾ. ಜಯಂತ್ ನಾರ್ಲಿಕರ್ ಅವರ ಪತ್ನಿ ಪ್ರಖ್ಯಾತ ಗಣಿತಜ್ಞೆ ಮತ್ತು ವಿಜ್ಞಾನಿ ಡಾ. ಮಂಗಳಾ ನಾರ್ಲಿಕರ್ ನಿಧನರಾಗಿದ್ದಾರೆ. 80 ವರ್ಷ ವಯಸ್ಸಾಗಿದದ್ ಅವರು ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ಜುಲೈ 17 ರಂದು ಮಹಾರಾಷ್ಟ್ರದ ಪುಣೆ ನಗರದಲ್ಲಿನ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮಂಗಳಾ ನಾರ್ಲಿಕರ್ ಅವರು ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲದಿಂದಲೂ ಕ್ಯಾನ್ಸರ್‌ನೊಂದಿಗೆ ಹೋರಾಡುತ್ತಿದ್ದರು . ಅವರ ಪಾರ್ಥೀವ …

Read More »

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜು.19ರಿಂದ ಆರಂಭ

ಬೆಂಗಳೂರು; ಕಾಂಗ್ರೆಸ್​ ಘೋಷಿಸಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜುಲೈ 19ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್​, ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರ, ಕರ್ನಾಟಕ ಒನ್, ಬಿಬಿಎಂಪಿ ವಾರ್ಡ್ ಕಚೇರಿ ಕೇಂದ್ರಗಲ್ಲಿ ಅರ್ಜಿ ಸಲ್ಲಿಸಬಹುದು ಎಂದರು. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್ ಲಿಂಕ್ ಆದ ಖಾತೆಗೆ …

Read More »
Translate »
error: Content is protected !!